ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಾಂಗ್ರೆಸ್ನ ಶಶಿ ತರೂರ್ ವಿರುದ್ಧ 16 ಸಾವಿರ ಮತಗಳಿಂದ ಸೋತಿದ್ದಾರೆ.
ಗಾಂಧಿ ಕುಟುಂಬದ ಕುಡಿ ರಾಹುಲ್ ಗಾಂಧಿ ಈ ಬಾರಿಯ ಲೋಕಸಭೆ ಚುನಾವಣೆ ಮೂಲಕ ಪ್ರಬಲ ರಾಜಕೀಯ ನಾಯಕನಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದಲ್ಲಿ 15ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಹೊಂದಿದ್ದೆವು. ಆದರೆ, ಒಂದು ಸ್ಥಾನದಿಂದ 9 ಸ್ಥಾನ ಗೆಲ್ಲುವ ಮೂಲಕ ಪಕ್ಷ ಉತ್ತಮ ಸಾಧನೆಯನ್ನೇ ಮಾಡಿದೆ. ಅಲ್ಲದೆ, 2019ಕ್ಕಿಂತ ಈ ಬಾರಿ ಶೇ.14ರಷ್ಟು ಮತ ಗಳಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
10 ವರ್ಷಗಳ ಹಿಂದೆ ನರೇಂದ್ರ ಮೋದಿಯವರ ಅಬ್ಬರದ ಗೆಲುವಿನ ಬಳಿಕ ನೆಲಕಚ್ಚಿದ್ದ 140 ವರ್ಷಗಳ ಇತಿಹಾಸವಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಈ ಬಾರಿಯ ಲೋಕಸಭೆ ಚುನಾವಣೆಯ ಮೂಲಕ ಪುನಃ ಫೀನಿಕ್ಸ್ ಹಕ್ಕಿಯಂತೆ ಎದ್ದುಬಂದಿದೆ.
ರಾಜ್ಯದ ಸಂಸತ್ ಸಮರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಕ್ಕೆ ನಾಡಿನ ಮತದಾರರು ಮನ್ನಣೆ ನೀಡಿದರೂ, ಕಳೆದ ಚುನಾವಣೆಗೆ ಹೋಲಿಸಿದರೆ ಬಿಜೆಪಿಗೆ ಹಿನ್ನಡೆಯಾಗಿದೆ.
ಕಾಂಗ್ರೆಸ್ನ ರಾಜ್ಯ ನಾಯಕರು 20 ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರೂ ಕನಿಷ್ಠ 14 ಗೆಲ್ಲುವ ವಿಶ್ವಾಸ ಹೊಂದಿದ್ದರು. ಗೆಲುವು ಕೈತಪ್ಪಲು ಸೂಕ್ತ ಅಭ್ಯರ್ಥಿ ಆಯ್ಕೆ ಮಾಡದಿರುವುದು ಹಾಗೂ ಒಳ ಜಗಳ ಕಾರಣವಾಗಿದೆ.