ಸೋಮವಾರ 2500 ಅಂಕಗಳ ಭಾರೀ ಏರಿಕೆ ಕಂಡಿದ್ದ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಮಂಗಳವಾರ 4389 ಅಂಕಗಳ ಭಾರೀ ಕುಸಿತ ಕಂಡು 72079ರಲ್ಲಿ ಮುಕ್ತಾಯವಾಗಿದೆ. ಹೂಡಿಕೆದಾರರ ಸಂಪತ್ತು 31 ಲಕ್ಷ ಕೋಟಿ ರು.ನಷ್ಟು ಕರಗಿದೆ.
ಗ್ಯಾರಂಟಿಗಳಿಂದಾಗುತ್ತಿರುವ ಅನ್ಯಾಯ ಹಾಗೂ ವಂಚನೆಗಳ ಬಗ್ಗೆ ಮತದಾರರಲ್ಲಿ ಜಾಗೃತಿ ಉಂಟು ಮಾಡಿದ ಹಿನ್ನೆಲೆಯಲ್ಲಿ ಪ್ರಬುದ್ಧ ಮತದಾರರು ಕಾಂಗ್ರೇಸ್ ಪಕ್ಷವನ್ನು ತಿರಸ್ಕರಿಸಿ ಎನ್ಡಿಎ ಅಭ್ಯರ್ಥಿಯನ್ನು ಬಹುಮತದಿಂದ ಆಯ್ಕೆ ಮಾಡಿದ್ದಾರೆಂದು ಮಾಜಿ ಶಾಸಕ ಜೆ ಕೆ ಕೃಷ್ಣಾರೆಡ್ಡಿ ನುಡಿದರು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸ್ಪರ್ಧಿಸಿದ್ದ ಸ್ಟಾರ್ ಚಂದ್ರು ಅವರಿಗೆ ಹೆಸರಿನಲ್ಲಿದ್ದ ಸ್ಟಾರ್ ಚುನಾವಣೆಯಲ್ಲಿ ಅವರ ಕೈಹಿಡಿಯಲೇ ಇಲ್ಲ.
ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವಂತೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಪಟ್ಟು ಹಿಡಿದು ಕರೆತಂದ ಸ್ಥಳೀಯ ಜೆಡಿಎಸ್ ಮಾಜಿ ಶಾಸಕರು ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸಂಘಟನಾತ್ಮಕ ಹೋರಾಟ ನಡೆಸಿ ವಿಜಯಮಾಲೆ ತೊಡಿಸಿದ್ದಾರೆ.
‘ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಇಂದಿನ ಎನ್ಡಿಎ ವಿಜಯವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ವಿಜಯವಾಗಿದೆ. ಇದು ದೇಶದ ಸಂವಿಧಾನದ ಮೇಲಿನ ನಂಬಿಕೆಗೆ ಸಂದ ಜಯ. ಇದು ‘ಸಬ್ಕಾ ಸತ್ ಸಬ್ಕಾ ವಿಕಾಸ್’ ಮಂತ್ರದ ವಿಜಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.
ಟಿಕೆಟ್ ಘೋಷಣೆ ಇನ್ನೂ 15 ದಿನಗಳ ಮುಂಚಿತವಾಗಿ ಮಾಡಿದ್ದರೆ ಇನ್ನೂ ಚೆನ್ನಾಗಿ ಪ್ರಚಾರ ನಡೆಸಬಹುದಾಗಿತ್ತು, ಚುನಾವಣೆಯ ಅರಿವು ಈಗ ಗೊತ್ತಾಗಿದೆ. ಮುಂದೆ ಕೋಲಾರದಲ್ಲಿಯೇ ಇದ್ದು ಪಕ್ಷ ಸಂಘಟನೆ ಮಾಡುತ್ತೇನೆ.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಬಿಜೆಪಿಯ ಉಚ್ಚಾಟಿತ ಮಾಜಿ ಶಾಸಕ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ. ರಘುಪತಿ ಭಟ್ ಪರ ಪೋಸ್ಟ್ ಮಾಡಿ, ಪಕ್ಷದ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ.