ಕಸ ವಿಲೇವಾರಿ ದೊಡ್ಡ ಮಾಫಿಯಾ: ಡಿ.ಕೆ.ಶಿವಕುಮಾರ್‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ. ಮಿಟ್ಟಗಾನಹಳ್ಳಿ ತ್ಯಾಜ್ಯ ಘಟಕವನ್ನು ನಾಲ್ಕು ಕಡೆಗೆ ವರ್ಗಾಯಿಸೋಣ ಎಂದರೆ ಆಗುತ್ತಿಲ್ಲ. ಒಂದೆಡೆ ಪ್ರಕರಣ ನ್ಯಾಯಾಲಯದಲ್ಲಿದೆ. ಮತ್ತೊಂದೆಡೆ ನಗರದ ಶಾಸಕರೂ ಬಿಡುತ್ತಿಲ್ಲ. ನನಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ’ ಹೀಗಂತ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ವಿಧಾನ ಪರಿಷತ್ನಲ್ಲಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.