ಮನೆ ಮನೆಗೆ ನಲ್ಲಿ ಯೋಜನೆಯಲ್ಲಿ ಶೇ 45 ರಷ್ಟು ಹಣ ಕೇಂದ್ರದ ಪಾಲಾಗಿದ್ದು, ಉಳಿದ ಹಣ ರಾಜ್ಯ ಸರ್ಕಾರ ನೀಡುತ್ತಿದೆ. ಆದರೆ ಬಿಜೆಪಿಯವರು ಇದು ಸಂಪೂರ್ಣ ಕೇಂದ್ರದ ಪಾಲೆಂದು ಹೇಳುತ್ತಿರುವುದು ಹಾಸ್ಯಾಸ್ಪದ
ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಅಭ್ಯರ್ಥಿಯಾಗಿ ಗುರುವಾರ ಉಮೇದುವಾರಿಕೆ ಸಲ್ಲಿಕೆ ಮಾಡಿರುವ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಥಿರಾಸ್ತಿ, ಚರಾಸ್ತಿ ಸೇರಿದಂತೆ ಒಟ್ಟು ₹ 9.11 ಕೋಟಿ ಆಸ್ತಿಯ ಒಡತಿಯಾಗಿದ್ದಾರೆ.
ಸಂಸತ್ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಇದು ಶತಸಿದ್ಧ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಖಚಿತ ಭವಿಷ್ಯ ನುಡಿದಿದ್ದಾರೆ.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ ನಾಗರಿಕರ ಸರ್ವತೋಮುಖ ಅಭಿವೃದ್ಧಿಯಾಗಲಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಹೇಳಿದರು.