ಪ್ರಧಾನಿ ಮೋದಿ ಅವರ ಪರಮಾಪ್ತರ ಆಸ್ತಿ ಮೌಲ್ಯ ಹೆಚ್ಚಾಗಿದೆ. ಇನ್ನೂ ಕಾಂಗ್ರೆಸ್ ತಾನು ಅಧಿಕಾರಕ್ಕೆ ಬಂದಲ್ಲಿ ಸ್ವಾಮಿನಾಥನ್ ವರದಿ ಜಾರಿ ಭರವಸೆ ನೀಡಿದೆ. ಈ ಬಗ್ಗೆ ಗಮನ ಹರಿಸಬೇಕಾಗಿದೆ.
ಗ್ಯಾರಂಟಿ ನೀಡಿ ರಾಜ್ಯವನ್ನು ಯಾರಿಗೆ ಅಡವಿಡುತ್ತೀರಿ. ಗ್ಯಾರಂಟಿಗಳು ಎಲ್ಲರಿಗೂ ತಲುಪುತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನದ ಕುರಿತು ಶ್ವೇತ ಪತ್ರ ಹೊರಡಿಸಬೇಕು. ಆಗ ಮಾತ್ರ ಎಷ್ಟು ಜನರಿಗೆ ಯೋಜನೆ ತಲುಪಿದೆ ಎಂದು ತಿಳಿಯುತ್ತದೆ.
ಎಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾದರೆ ಕೇಂದ್ರದಲ್ಲಿ ಮಂತ್ರಿಯಾಗಿ ಉನ್ನತ ಸ್ಥಾನ ಪಡೆಯಲಿದ್ದು, ಆನಂತರ ಎಲ್ಲರೂ ಸೇರಿ ರಾಜ್ಯದ ಸಮಗ್ರ ಅಭಿವೃದ್ದಿ ಕೆಲಸ ಮಾಡಬಹುದು
ಪ್ರಧಾನಿ ಮೋದಿ ಭಾರತವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದಾರೆ ಎಂಬುದನ್ನು ಅರಿಯಬಹುದಾಗಿದೆ. ಆರ್.ಎಸ್.ಎಸ್ ಆಶಯದಂತೆ ನವ ಮನುವಾದ ನಿರ್ಮಾಣ ಇವರ ಗುರಿಯಾಗಿದೆಯೇ ಹೊರತು ಸಂವಿಧಾನ ಆಶಯ ಜಾರಿಯಲ್ಲ.
ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಐದು ಮಂದಿ ವಿಧಾನ ಪರಿಷತ್ ಸದಸ್ಯರಿದ್ದಾರೆ. ಹಲವಾರು ಮಂದಿ ಮಾಜಿ ಸದಸ್ಯರು ಇದ್ದಾರೆ. ಈ ಪೈಕಿ ಕೆಲವರು ಲೋಕಸಭಾ ಚುನಾವಣೆಯಲ್ಲಿ ಸಕ್ರಿಯ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮತ್ತೆ ಕೆಲವರು ಸಭೆಗಳಿಗೆ ಸೀಮಿತವಾಗಿದ್ದಾರೆ.
ಶಿವಕುಮಾರ್ ದಿನ ಬೆಳಗಾದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳುತ್ತಾರೆ, ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷಗಳ ಅವಧಿಗೆ ನಮ್ಮ ತಂದೆಯೇ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಾರೆ, ಇದರಲ್ಲಿ ಜನರು ಯಾವುದನ್ನು ನಂಬಬೇಕು.
ಈ ಹಿಂದೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ಜಯದೇವ ಆಸ್ಪತ್ರೆಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆ ಮಾಡದಂತೆ ತಡೆಯೊಡ್ಡಿದ್ದನ್ನು ಜನ ಮರೆಯಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿ ಕೂಟ 200ರಿಂದ 220 ಸೀಟು ಗೆದ್ದರೆ ಅದೇ ಜಾಸ್ತಿ. ಈ ಬಾರಿ ಮತ್ತೆ ಎನ್ಡಿಎ ಅಧಿಕಾರಕ್ಕೆ ಬರೋದಿಲ್ಲ, ಮೋದಿ ಮತ್ತೆ ಪ್ರಧಾನಿಯೂ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚುನಾವಣೆ ಮುಗಿದ 15 ದಿನಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೋ ಯೋಜನೆ ಹಾಕಿಕೊಂಡಿದ್ದಾರೆ. ಆಗ ಕಾಂಗ್ರೆಸ್ ಒಡೆದು ಹೋಗುತ್ತದೆ.