ಧಾರವಾಡ ಜಿಲ್ಲೆಯ ಜನರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಫಕೀರ ದಿಂಗಾಲೇಶ್ವರ ಶ್ರೀಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮತದಾರರಿಗೆ ಬೆದರಿಕೆ ಹಾಕಿದ ಹಾಗೂ ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕ ರವಿ ಸುಬ್ರಹ್ಮಣ್ಯ ಸೇರಿದಂತೆ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಸೇರಿದಂತೆ ಇತರರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.