ಕಲ್ಪತರು ನಾಡು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ರಂಗೇರಿದ್ದು, ಸ್ಥಳೀಯರು ಹಾಗೂ ಹೊರಗಿನವರು ಎಂಬ ಕೂಗು ಕೂಡ ಜೋರಾಗಿ ಕೇಳಿ ಬರುತ್ತಿದೆ.
ಇದು ಪ್ರಜಾಪ್ರಭುತ್ವದ ಕಾಲ. ನಾನು ಮೈಸೂರು ಜನರ ಪ್ರತಿನಿಧಿಯಾಗಿ ಪ್ರಧಾನಿ ಜೊತೆ ಚಾಮುಂಡೇಶ್ವರಿಯ ತೇರು ಎಳೆಯಲು ಅವಕಾಶ ಮಾಡಿಕೊಡಿ ಎಂದು ಮೈಸೂರು ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೋರಿದರು.
ಈ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನೀವು ಅಡ್ರೆಸ್ಗೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಡೀ ವಿಶ್ವದಲ್ಲಿಯೇ ಈ ದೇಶಕ್ಕೆ ಕೀರ್ತಿ ತಂದುಕೊಟ್ಟ 120 ಕೋಟಿ ಜನತೆಯ ಪ್ರಧಾನಿಯನ್ನು, 6 ಕೋಟಿ ಜನರ ಮುಖ್ಯಮಂತ್ರಿ ಲಘುವಾಗಿ ಮಾತನಾಡುವುದು ಎಷ್ಟು ಸರಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.
ಬಿಜೆಪಿ ಬಿಡುಗಡೆಗೊಳಿಸಿರುವ ಸಂಕಲ್ಪ ಪತ್ರದಲ್ಲಿ ಮೋದಿ ಗ್ಯಾರಂಟಿ ಅಡಗಿದೆ. ಈ ಬಾರಿಯ ಚುನಾವಣೆ ಕೇವಲ ಐದು ವರ್ಷಕ್ಕೆ ಅಲ್ಲ, ಬದಲಿಗೆ 2047 ರವರೆಗಿನ ಭಾರತದ ಭವಿಷ್ಯ ಇದರಲ್ಲಿ ಅಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಭಾನುವಾರ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ ಹಾಗೂ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.