ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಾರ್ಥ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ದ.ಕ.ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಅದರಲ್ಲೂ 33 ವರ್ಷಗಳಿಂದ ಬಿಜೆಪಿ ವಶದಲ್ಲಿರುವ ಕ್ಷೇತ್ರವನ್ನು ಮರು ವಶಕ್ಕೆ ಕೈ ಪಡೆ ಇನ್ನಿಲ್ಲದ ಹರಸಾಹಸ ನಡೆಸುತ್ತಿದೆ. ತನ್ನದೇ ಪ್ರಾಬಲ್ಯದಲ್ಲಿ ಉಳಿಸಿಕೊಳ್ಳಲು ಬಿಜೆಪಿ ಕೂಡ ಕಸರತ್ತಿಗೆ ಇಳಿದಿದೆ.
ರಾಧಾಕೃಷ್ಣಗೆ ಮತ ಕೊಟ್ಟು ನೋಡಿ, ಮುಂದಿನ 5 ವರ್ಷದಲ್ಲಿ ಏನ್ ಬದಲಾವಣೆ ಆಗುತ್ತೇ ಅಂತ, ನಾನು ಇನ್ನೂ ಸತ್ತಿಲ್ಲ, ಬದುಕಿದ್ದೇನೆ ಕೆಲಸ ಮಾಡಲು ಬದ್ದನಾಗಿದ್ದೇನೆ, ಹೀಗೆಂದು ತುಂಬಾ ಭಾವುಕರಾಗಿ ಹೇಳಿದ್ದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಮುನಿಸಿಕೊಂಡಿದ್ದ ಮಾಜಿ ಸಚಿವ ಮಾಧುಸ್ವಾಮಿ ಅವರು ಇದೀಗ ಇದೇ ಮೊದಲ ಬಾರಿಗೆ ಪಕ್ಷದ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರದಲ್ಲಿ ಧುಮುಕಿದ್ದಾರೆ ಮತ್ತು ಅತೃಪ್ತರ ಮನವೊಲಿಕೆಗೆ ಮುಂದಾಗಿದ್ದಾರೆ.