ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುದ್ರಿತ ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚಲು ಮುಂದಾಗಿರುವುದನ್ನು ತಡೆಯಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಸದ್ಯ ಇರುವ ಪರಿಸ್ಥಿತಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಜನರು ಕಾಂಗ್ರೆಸ್ ಪರವಾಗಿದ್ದಾರೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಹೇಳಿದರು.
ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಏ.13ರಿಂದ 18ರವರೆಗೆ ಮನೆಯಿಂದ ಅಂಚೆ ಮತದಾನ ನಡೆಯಲಿದ್ದು, 6,372 ಮಂದಿ ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರು ಮನೆಯಿಂದ ಮತದಾನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಯವರ ಫೋನ್ ಟ್ಯಾಪಿಂಗ್ ಮಾಡಿಸಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ
ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ತೀವ್ರಗೊಂಡ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ.
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್ ಟ್ಯಾಪಿಂಗ್ ಕುರಿತು ದಾಖಲೆಗಳಿವೆ. ಸೂಕ್ತ ಸಮಯದಲ್ಲಿ ದಾಖಲೆ ಸಮೇತ ಮಾತನಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತಮ್ಮ ವಿರುದ್ಧ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾಡಿರುವ ಆದಿಚುಂಚನಗಿರಿ ಶ್ರೀಗಳ ಫೋನ್ ಟ್ಯಾಪಿಂಗ್ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.