‘ಬರೆದಿಟ್ಟುಕೊಳ್ಳಿ, ಈ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ’ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ‘ಬರೆದಿಟ್ಟುಕೊಳ್ಳಿ, ಈ ಬಾರಿ ಎನ್ಡಿಎ ಹಿಂದಿನ ಎಲ್ಲಾ ದಾಖಲೆ ಮುರಿದು 400 ಸೀಟಿಗಿಂತ ಹೆಚ್ಚು ಗೆಲ್ಲಲಿದೆ ಎಂದು ಹೇಳಿದ್ದಾರೆ.
ಯೋಧರನ್ನು ಬಲಿ ಪಡೆದ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್ ದಾಳಿಯ ಕುರಿತು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ
ಲೋಕಸಭಾ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದ್ದು, ಆರು ಸ್ಥಾನಗಳ ಪೈಕಿ ಎರಡು ಸ್ಥಾನಗಳ ನಿರೀಕ್ಷೆಯನ್ನು ಜೆಡಿಎಸ್ ಹೊಂದಿದೆ.
ಲೋಕಸಭೆ ಚುನಾವಣೆ ನಡೆಯುತ್ತಿರುವಾಗ ಒಂದಾದ ಮೇಲೊಂದು ವಿವಾದದಲ್ಲಿ ಸಿಲುಕುತ್ತಿರುವ ಕಾಂಗ್ರೆಸ್ ಪಕ್ಷ ಇದೀಗ ಇನ್ನೊಂದು ಮುಜುಗರಕ್ಕೊಳಗಾಗಿದ್ದು, ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಪಾಕಿಸ್ತಾನವನ್ನು ಹೊಗಳುವ ಹಳೆಯ ವಿಡಿಯೋವೊಂದು ಈಗ ಬಯಲಿಗೆ ಬಂದು ವೈರಲ್ ಆಗಿದೆ.