ಬರ ಪರಿಹಾರ ನೀಡುವ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವ ಮೂಲಕ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಚಾರವನ್ನು ಉದ್ಘಾಟಿಸಿದ್ದಾರೆ. ಅವರ ಸುಳ್ಳಿನ ಪ್ರಚಾರಕ್ಕೆ ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಸುಮಲತಾ ಪಾಲಿಗೆ ಕಾಂಗ್ರೆಸ್ ಬಾಗಿಲು ಮುಚ್ಚಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಗೆಲುವು ಕಷ್ಟವಾಗಬಹುದೆಂಬ ಅಭಿಪ್ರಾಯದೊಂದಿಗೆ ಮೈತ್ರಿಧರ್ಮ ಪಾಲಿಸುವುದೇ ಸೂಕ್ತ ಎಂದು ಗಂಭೀರವಾಗಿ ಆಲೋಚಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂಡಿಯಾ ಮಿತ್ರ ಪಕ್ಷಗಳ ಕಾರ್ಯಕರ್ತರು ಎಲ್ಲ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವುದಾಗಿ ಸಭೆಯಲ್ಲಿ ಘೋಷಿಸಿದರು.
ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುವುದು ಅಗತ್ಯ ಎಂಬ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಮತ್ತೋರ್ವ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಇಂಥದ್ದೇ ಅರ್ಥದ ಹೇಳಿಕೆ ನೀಡಿದ್ದಾರೆ
‘ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ನ ರಾಜ್ಯ ನಾಯಕರ ನಡುವೆ ಮಾತ್ರ ಸಮನ್ವಯತೆ ಅಥವಾ ಹೊಂದಾಣಿಕೆ ಇದ್ದರೆ ಸಾಲದು, ತಳಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರ ನಡುವೆಯೂ ಸಮನ್ವಯತೆ ಮೂಡುವಂತೆ ನೋಡಿಕೊಳ್ಳಬೇಕು’ ಎಂದು ಅಮಿತ್ ಶಾ ಅವರು ಉಭಯ ಪಕ್ಷಗಳ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.