ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡು ಪಕ್ಷಗಳಿಗೆ ಆನೆಬಲ: ಸಿ.ಎಸ್. ಪುಟ್ಟರಾಜು2018ರಲ್ಲಿ ಕಾಂಗ್ರೆಸ್ ನವರೊಂದಿಗೆ ಮೈತ್ರಿ ಸರಕಾರ ಮಾಡಿ ಸಾಕಷ್ಟು ನೋವು ಅನುಭವಿಸಿದ್ದೇವೆ. ಆ ಪಕ್ಷವನ್ನು ಅಧಿಕಾರದಿಂದ ದೂರ ಇಡಬೇಕು ಎಂಬ ಉದ್ದೇಶದಿಂದಲೇ ಜೆಡಿಎಸ್, ಬಿಜೆಪಿ ಪಕ್ಷಗಳು ಹುಟ್ಟಿಕೊಂಡಿವೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕಪಾಠ ಕಲಿಸಬೇಕಾಗಿದೆ. ಏ.2ರಂದು ಪಟ್ಟಣದ ಟಿಎಪಿಸಿಎಂಎಸ್ ನಲ್ಲಿ ಜೆಡಿಎಸ್-ಬಿಜೆಪಿ ಪಕ್ಷದ ಜಂಟಿ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಆಗಮಿಸಬೇಕು.