‘ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದ್ದು ಕಾಂಗ್ರೆಸ್’ ಎಂಬ ಪ್ರಧಾನಿ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕೇಂದ್ರ ಮೇಕೆದಾಟು ಯೋಜನೆಗೆ ಅನುಮತಿ ನೀಡಲಿ, ಆಗ ನಾಳೆಯೇ ಕಾಮಗಾರಿ ಶುರು ಮಾಡಿ ನೀರಿನ ಸಮಸ್ಯೆಗೆ ತಿಲಾಂಜಲಿ ಹಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶಬಾಬು ಇದೇ ವಿಧಾನಸಭೆ ಕ್ಷೇತ್ರಕ್ಕೆ ಸೇರಿದ್ದು, ಹಿಂದಿನ 2 ಬಾರಿ ಸೋತಿದ್ದು ಈ ಅನುಕಂಪ ಮಲ್ಲೇಶಬಾಬು ಅವರನ್ನು ಗೆಲ್ಲಿಸುವುದೇ?
ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆವ ಪಕ್ಷವಾಗಿದೆ, 5 ಗ್ಯಾರಂಟಿಗಳು ಈಡೇರಿಸಿದ ಮಾದರಿಯಲ್ಲಿಯೇ ಮುಂದೆಯೂ ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಆಡಳಿತಕ್ಕೆ ಬಂದರೆ 25 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿದೆ