ನಗರ್ತಪೇಟೆಯಲ್ಲಿ ಅಕ್ರಮವಾಗಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಆರೋಪದಡಿ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ ಸೇರಿದಂತೆ 44 ಮಂದಿ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ. ದಕ್ಷಿಣ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಒಟ್ಟು ಮೂರು ಬಾರಿ ಪಕ್ಷೇತರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಅಸ್ತಿತ್ವದಲ್ಲಿದೆ. ಈವರೆಗೆ ನಡೆದಿರುವ 17 ಚುನಾವಣೆಗಳ ಪೈಕಿ 13 ರಲ್ಲಿ ಕಾಂಗ್ರೆಸ್ ಹಾಗೂ 4 ಬಾರಿ ಬಿಜೆಪಿ ಜಯಭೇರಿ ಬಾರಿಸಿವೆ.