ಈ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನೀವು ಅಡ್ರೆಸ್ಗೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಡೀ ವಿಶ್ವದಲ್ಲಿಯೇ ಈ ದೇಶಕ್ಕೆ ಕೀರ್ತಿ ತಂದುಕೊಟ್ಟ 120 ಕೋಟಿ ಜನತೆಯ ಪ್ರಧಾನಿಯನ್ನು, 6 ಕೋಟಿ ಜನರ ಮುಖ್ಯಮಂತ್ರಿ ಲಘುವಾಗಿ ಮಾತನಾಡುವುದು ಎಷ್ಟು ಸರಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.
ಬಿಜೆಪಿ ಬಿಡುಗಡೆಗೊಳಿಸಿರುವ ಸಂಕಲ್ಪ ಪತ್ರದಲ್ಲಿ ಮೋದಿ ಗ್ಯಾರಂಟಿ ಅಡಗಿದೆ. ಈ ಬಾರಿಯ ಚುನಾವಣೆ ಕೇವಲ ಐದು ವರ್ಷಕ್ಕೆ ಅಲ್ಲ, ಬದಲಿಗೆ 2047 ರವರೆಗಿನ ಭಾರತದ ಭವಿಷ್ಯ ಇದರಲ್ಲಿ ಅಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಭಾನುವಾರ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭರ್ಜರಿ ರೋಡ್ ಶೋ ಹಾಗೂ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.
ದೇಶದಲ್ಲಿ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದೆ, ದೇಶದಲ್ಲಿ ನಿರ್ಮಿಸಲಾಗಿರುವ ಸೇತುವೆಗಳು, ಕಾರ್ಖಾನೆಗಳು, ಎಲ್ಲವು ಕಾಂಗ್ರೆಸ್ ಪಕ್ಷದ ಕೊಡುಗೆಯಾಗಿದೆ. ರಾಜ್ಯ ಸರ್ಕಾರ 5 ಗ್ಯಾರೆಂಟಿಗಳನ್ನು ಈಡೇರಿಸಿದೆ