ದಾವಣಗೆರೆ ಟಿಕೆಟ್: ಬಿಜೆಪಿಯಲ್ಲಿ ಇನ್ನೂ ಶಮನವಾಗದ ಭಿನ್ನಮತದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಇನ್ನೂ ಶಮನವಾಗಿಲ್ಲ. ಟಿಕೆಟ್ ವಿಚಾರವಾಗಿ ನಗರದಲ್ಲಿ ಭಾನುವಾರ ಅಸಮಾಧಾನಿತರ ಗುಂಪಿನ ಸಭೆ ನಡೆದು, ಜಿ.ಎಂ.ಸಿದ್ದೇಶ್ವರ ಕುಟುಂಬಕ್ಕೆ ಟಿಕೆಟ್ ನೀಡಿದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.