ಮಾಜಿ ಶಾಸಕ ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ವಿಧಾನ ಪರಿಷತ್ ಅಥವಾ ವಿಧಾನಸಭೆಯಲ್ಲಿ ಅವಕಾಶ ದೊರಕಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಗುರುವಾರ ನಗರದಲ್ಲಿ ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಭೆ ನಡೆಸಿ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟು ಹಾಗೂ ನಿಷ್ಠೆಯಿಂದ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.
ಎಚ್ಡಿಡಿ - ಡಿಕೆಶಿ ಕುಟುಂಬಗಳ ನಡುವಿನ ಪ್ರತಿಷ್ಠೆಯ ಫೈಟ್- ಯೋಗೇಶ್ವರ್ ವೇಗ ತಗ್ಗಿಸಲು ಡಿ.ಕೆ. ಸಹೋದರರಿಗೆ ನಿಶಾ ಯೋಗೇಶ್ವರ್ ಅಸ್ತ್ರ- ಕಾಂಗ್ರೆಸ್ಗೆ ಶಾಸಕರ ಶಕ್ತಿ । ಜೆಡಿಎಸ್ - ಬಿಜೆಪಿಗೆ ಡಾಕ್ಟರ್ ಮಂಜುನಾಥ್ ಬಲ
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ 10 ತಿಂಗಳ ಅವಧಿಯಲ್ಲಿ ಎಷ್ಟು ಉದ್ಯೋಗ ಸೃಷ್ಟಿಸಿದೆ ಎಂದು ವಿವರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ಗಣನೀಯ ಪಾತ್ರ ನಿರ್ವಹಿಸಿದ ಪಂಚಮಸಾಲಿ ಲಿಂಗಾಯತರನ್ನು ಪಕ್ಷ ಕಡೆಗಣಿಸಿದೆ ಎಂದು ಆರೋಪಿಸಿದರು
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುದ್ರಿತ ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚಲು ಮುಂದಾಗಿರುವುದನ್ನು ತಡೆಯಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಸದ್ಯ ಇರುವ ಪರಿಸ್ಥಿತಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಜನರು ಕಾಂಗ್ರೆಸ್ ಪರವಾಗಿದ್ದಾರೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಹೇಳಿದರು.
ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಏ.13ರಿಂದ 18ರವರೆಗೆ ಮನೆಯಿಂದ ಅಂಚೆ ಮತದಾನ ನಡೆಯಲಿದ್ದು, 6,372 ಮಂದಿ ಹಿರಿಯ ನಾಗರಿಕರು ಮತ್ತು ಅಂಗವಿಕಲ ಮತದಾರರು ಮನೆಯಿಂದ ಮತದಾನಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿಯವರ ಫೋನ್ ಟ್ಯಾಪಿಂಗ್ ಮಾಡಿಸಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ
ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ತೀವ್ರಗೊಂಡ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ.