14 ಲೋಕಸಭಾ ಕ್ಷೇತ್ರಗಳ ನಾಮಪತ್ರ ಪರಿಶೀಲನೆ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, 24 ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯವಾಗಿವೆ.
ಶುಕ್ರವಾರ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದ 25 ಗ್ಯಾರಂಟಿಗಳುಳ್ಳ ಪ್ರಣಾಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ‘ಇದು ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಮುಸ್ಲಿಂ ಲೀಗ್ ಹೊಂದಿದ್ದ ಚಿಂತನೆಯನ್ನೇ ಪ್ರತಿಬಿಂಬಿಸುತ್ತದೆ ಎಂದಿದ್ದಾರೆ
ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕು. ಕೊಟ್ಟ ಕೆಲಸ ಸಮರ್ಥವಾಗಿ ಮಾಡದಿದ್ದರೆ ಚುನಾವಣೆ ನಂತರ ಮಾಜಿಯಾಗುತ್ತೀರಿ ಎಂಬುದು ತಲೆಯಲ್ಲಿ ಇರಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.