ಲೋಕಸಭಾ ಅವಧಿ ಮುಗಿದ ಬಳಿಕ ನಾನು ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತೇನೆ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿರುವುದರಿಂದ ಬಿಜೆಪಿ ಪಕ್ಷನ್ನು ಸೇರುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇ.ಡಿ 2018ರಲ್ಲಿ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಹತ್ವದ ಗೆಲುವು ಸಿಕ್ಕಿದೆ. ಡಿ.ಕೆ.ಶಿವಕುಮಾರ್ ಸೇರಿ ಐದು ಮಂದಿ ವಿರುದ್ಧ ಇ.ಡಿ.ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
ಜೆಡಿಎಸ್ ಭದ್ರಕೋಟೆ ಎಂದೇ ಹೆಸರಾಗಿದ್ದ ಮಂಡ್ಯ ಜಿಲ್ಲೆಯೊಳಗೆ ಈಗ ದಳಪತಿಗಳ ದನಿ ಅಡಗಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದರೂ ಪಕ್ಷದೊಳಗೆ ಯಾವುದೇ ಸಿದ್ಧತೆ ಆರಂಭಗೊಂಡಿಲ್ಲ. ಬಿಜೆಪಿ-ಜೆಡಿಎಸ್ ಚುನಾವಣಾ ಮೈತ್ರಿಯಿಂದ ಮಂಡ್ಯ ಕ್ಷೇತ್ರ ದಳಪತಿಗಳ ಕೈತಪ್ಪಿಹೋಗಬಹುದೆಂಬ ಆತಂಕ ಅವರಲ್ಲಿದೆ.