ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಕ್ಕೆಐವರು ಅಭ್ಯರ್ಥಿಗಳು ಕಣದಲ್ಲಿರುವ ಹಿನ್ನೆಲೆಯಲ್ಲಿ ಕುತೂಹಲ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ನಡೆಯುವ ಸಾಧ್ಯತೆ ಕಾರಣ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿವೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ವರ್ಷಕ್ಕೆ ಮೂರು ಬಾರಿ ನಡೆಸುವ ಆದೇಶವನ್ನು ಹಿಂಪಡೆಬೇಕೆಂದು ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ವಾರಾಣಸಿಯ ಜನರು ಕುಡುಕರು ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ‘ತಮ್ಮ ಮೇಲೆಯೇ ಪ್ರಜ್ಞೆ ಇಲ್ಲದ ಜನರು ನಶೆಯ ಬಗ್ಗೆ ಮಾತನಾಡುತ್ತಾರೆ’ ಎಂದು ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠ ರಾಹುಲ್ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.