ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ. ದಕ್ಷಿಣ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಒಟ್ಟು ಮೂರು ಬಾರಿ ಪಕ್ಷೇತರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಅಸ್ತಿತ್ವದಲ್ಲಿದೆ. ಈವರೆಗೆ ನಡೆದಿರುವ 17 ಚುನಾವಣೆಗಳ ಪೈಕಿ 13 ರಲ್ಲಿ ಕಾಂಗ್ರೆಸ್ ಹಾಗೂ 4 ಬಾರಿ ಬಿಜೆಪಿ ಜಯಭೇರಿ ಬಾರಿಸಿವೆ.