ತೆರಿಗೆ ಪಾಲು, ಅನುದಾನ ಹಂಚಿಕೆ ಮತ್ತು ಬರ ಪರಿಹಾರ ನೀಡುವುದರಲ್ಲಿ ತೋರುತ್ತಿರುವ ಮಲತಾಯಿ ಧೋರಣೆ ಹಾಗೂ ಈ ವಿಚಾರದಲ್ಲಿ ರಾಜ್ಯಕ್ಕೆ ಸತತವಾಗಿ ಆಗುತ್ತಿರುವ ಭಾರೀ ಅನ್ಯಾಯ ಖಂಡಿಸಿ ಕೇಂದ್ರದ ಸರ್ಕಾರದ ವಿರುದ್ಧ ರಾಜ್ಯದ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಬುಧವಾರ ನಡೆಸಲಿದೆ.
ಅನುದಾನ ನೀಡಿಕೆಯಲ್ಲಿ ತಾರತಮ್ಯ ನೀಡಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಅತ್ತ ದೆಹಲಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದರೆ, ಇತ್ತ ಬೆಂಗಳೂರಿನಲ್ಲಿ ಬಿಜೆಪಿಯು ಬರ ಪರಿಹಾರ ಕ್ರಮಗಳಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ.
ಆಡಳಿತಾರೂಢ ಜೆಎಂಎಂ- ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯಬಹುದು, ಜಾರ್ಖಂಡ್ ಸರ್ಕಾರ ಪತನಕ್ಕೆ ಕಾರಣವಾಗಬಹುದು ಎಂಬ ಲೆಕ್ಕಾಚಾರಗಳು ಹುಸಿಯಾಗಿದ್ದು, ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದ ಸರ್ಕಾರ ಸೋಮವಾರ ಬಹುಮತ ಪರೀಕ್ಷೆಯಲ್ಲಿ ಪಾಸಾಗಿದೆ.
ಕೇಂದ್ರ ಸರ್ಕಾರ ಸರಿಯಾಗಿ ತೆರಿಗೆ ಹಣವನ್ನು ನೀಡುತ್ತಿಲ್ಲ ಎಂದು ಆರೋಪ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.