ರಸ್ತೆ ಅಗಲೀಕರಣಕ್ಕಾಗಿ ಬೆಂಗಳೂರು ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ₹3,011 ಕೋಟಿ ಟಿಡಿಆರ್ ಪರಿಹಾರ ನೀಡುವುದರಿಂದ ಪಾರಾಗಲು ಸುಪ್ರೀಂ ಕೋರ್ಟ್ ಹಿರಿಯ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.
ಸಿದ್ದರಾಮಯ್ಯ ಸಾಹೇಬ್ರು ಪ್ರಾಮಾಣಿಕರಾಗಿರುವುದರಿಂದ ಯಾವುದೇ ತಪ್ಪು ಮಾಡಿಲ್ಲ. ಅವರು ಆವತ್ತು ಪ್ರಾಮಾಣಿಕರೇ ಈವತ್ತೂ ಪ್ರಾಮಾಣಿಕರೇ ಎಂದು ಶಾಸಕ ಪ್ರದೀಪ್ ಈಶ್ವರ್ ಮುಖ್ಯಮಂತ್ರಿಗಳನ್ನು ಸಮರ್ಥಿಸಿದ್ದಾರೆ.
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಲು ಲೋಕಾಯುಕ್ತ ಪೊಲೀಸರು ಮುಂದಾಗಿರುವುದಕ್ಕೆ ಬಿಜೆಪಿ ತೀವ್ರವಾಗಿ ಟೀಕಿಸಿದೆ.
ಕೇತಗಾನಹಳ್ಳಿಯ ತಮ್ಮ ಜಮೀನು ಸಮೀಕ್ಷೆ ಸೇಡಿನ ರಾಜಕೀಯದ ಭಾಗವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರೀತಿ ನಾನು ಸರ್ಕಾರಿ ಭೂಮಿಯನ್ನು ಸುಳ್ಳು ದಾಖಲೆ ಸೃಷ್ಟಿಸಿ ಪಡೆದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
‘ನಿಮ್ಮ ನೇತೃತ್ವದಲ್ಲಿ ರಾಜ್ಯಗಳಲ್ಲಿ ನಡೆಯಲಿರುವ ಮುಂದಿನ ಚುನಾವಣಾ ಫಲಿತಾಂಶಕ್ಕೆ ನೀವೇ ಉತ್ತರದಾಯಿಗಳು. ಕಾಂಗ್ರೆಸ್ ರಾಜ್ಯ ಘಟಕದ ಉಸ್ತುವಾರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟ ಸೂಚನೆ
ತಮ್ಮ ವಿರುದ್ಧ ಚಟುವಟಿಕೆ ನಡೆಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರ ಮುಖಂಡರನ್ನು ‘ರೆಬೆಲ್ಸ್’ (ಬಂಡಾಯಗಾರರು) ಎಂಬುದಾಗಿ ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ.
ಕೆಲದಿನಗಳ ಕಾಲ ಸುಮ್ಮನಾಗಿದ್ದ ಬಿಜೆಪಿ ಭಿನ್ನಮತೀಯ ಮುಖಂಡರು ಗುರುವಾರ ಮತ್ತೆ ಸಭೆ ನಡೆಸುವ ಮೂಲಕ ತಮ್ಮ ಅಸ್ತಿತ್ವ ಸಾಬೀತುಪಡಿಸಲು ಮುಂದಾಗಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಬಿರುಸಿನ ಚಟುವಟಿಕೆ ನಡೆಯುತ್ತಿರುವ ಮಧ್ಯೆಯೇ ರಾಜ್ಯ ಉಸ್ತುವಾರಿ ಬದಲಿಸುವ ಬಗ್ಗೆಯೂ ಪ್ರಸ್ತಾಪವಾಗಿದೆ.