‘ಬಜೆಟ್ನಲ್ಲಿ ದಕ್ಷಿಣ ರಾಜ್ಯಗಳನ್ನು ಕಡೆಗಣಿಸಲಾಗುತ್ತಿದೆ. ಇದೇ ಮುಂದುವರಿದರೆ ದಕ್ಷಿಣ ಭಾರತದ ರಾಜ್ಯಗಳು ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಬೇಕಾಗುತ್ತದೆ’ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ವಿರುದ್ಧ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.
ಕಾಂಗ್ರೆಸ್ ಪಕ್ಷದೊಳಗೆ ಬಣ ರಾಜಕೀಯ, ಒಳಜಗಳ ತಾಂಡವವಾಡುತ್ತಿದೆ. ಸಿದ್ದರಾಮಯ್ಯ, ಡಿಕೆಶಿ ಬಣದವರು ಪರಸ್ಪರ ಕಾಲೆಳೆದಾಟದಲ್ಲಿ ತೊಡಗಿದ್ದಾರೆ. ಯಾರು ಯಾರನ್ನು ಟ್ರ್ಯಾಪ್ ಮಾಡಿದ್ದಾರೆನ್ನುವುದು ಅವರಿಗೇ ತಿಳಿಯದಂತಾಗಿದೆ ಎಂದು ಮಾಜಿ ಶಾಸಕ ಕೆ.ಸುರೇಶ್ಗೌಡ ಹೇಳಿದರು.
ದೇವೇಗೌಡ ಮತ್ತು ಕುಮಾರಸ್ವಾಮಿ ಆರೋಗ್ಯ ಕೆಡಿಸಿದವರು ಚಲುವರಾಯಸ್ವಾಮಿಯೇ ಹೊರತು ಇನ್ಯಾರೂ ಅಲ್ಲ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇರವಾಗಿ ಆರೋಪಿಸಿದರು.
ದೇಶದಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಾದ ಮಹಾತ್ಮ ಗಾಂಧಿ ನರೇಗಾದಲ್ಲಿ 60 ಸಾವಿರ ಕೋಟಿಯಷ್ಟು ಕಡಿಮೆಯಾಗಿದೆ ಮತ್ತು ದೇಶದ ಆರ್ಥಿಕ ಪರಿಸ್ಥಿತಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಮಾಜಿ ಸಂಸದ ಡಾ. ಎಂ.ವೀರಪ್ಪ ಮೊಯ್ಲಿ ಕಳಳ ವ್ಯಕ್ತಪಡಿಸಿದರು.