ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.7ರಂದು ದಾಖಲೆಯ 16ನೇ ಬಜೆಟ್ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.
ಕೆಲ ವಿಚಾರಗಳಿಗಾಗಿ ಬೇಸರಗೊಂಡು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಮಹತ್ವದ ಹುದ್ದೆ ಕಲ್ಪಿಸಿದ್ದಾರೆ.
ಸಿದ್ದರಾಮಯ್ಯ ಹೆಸರು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನೀಡಿರುವ ತಿರುಗೇಟು ಇದು.
ರಾಜ್ಯ ಕಾಂಗ್ರೆಸ್ನಲ್ಲಿ ಬಣ ರಾಜಕಾರಣ ತೀವ್ರಗೊಳ್ಳುತ್ತಿರುವ ಈ ಹಂತದಲ್ಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದಾರೆ. ಪರಮೇಶ್ವರ್ ಅವರ ಈ ನಡೆ ತೀವ್ರ ಕುತೂಹಲ ಕೆರಳಿಸಿದೆ.
ವಿಚಾರಣೆ ನಡೆಸಿದ ಡಿವೈಎಸ್ಪಿ ಅವರು ಮೊದಲು ಆ ಪಿಎಗೆ ಪೇಪರ್, ಪೆನ್ನು ಕೊಟ್ಟು ಬರ್ಕೋ ಅಂದಿದ್ದಾರೆ. ಏನ್ ಬರಿಲಿ ಸಾರ್... ಎಂದರೆ, ಡಿವೈಎಸ್ಪಿ ಯಾರು ಎಂದು ಕೇಳಿದೆಯಲ್ವಾ, ನನ್ನ ಹೆಸರು ಬಾಲರಾಜ್ ಬರ್ಕೋ ಅಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಫೆ.20ರೊಳಗೆ ಉತ್ತರ ಸಿಗಲಿದೆ. ಈ ಬಗ್ಗೆ ನಾನು ಹಿಂದೆಯೇ ಹೇಳಿದ್ದೇನೆ. ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ದೆಹಲಿಯಲ್ಲಿ ನಡೆಯುತ್ತಿದ್ದು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.