₹18000 ಕೋಟಿ ಬರ ಪರಿಹಾರಕ್ಕೆ ಸಿಎಂ ಕೇಂದ್ರಕ್ಕೆ ಮೊರೆಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ವಿವರಣೆ ನೀಡಿ, ಪರಿಹಾರ ಬಿಡುಗಡೆಗೆ ಮನವಿ ಮಾಡಿದರು. ಈ ವೇಳೆ ರಾಜ್ಯದ 236 ತಾಲೂಕುಗಳ ಪೈಕಿ 223 ಬರಪೀಡಿತವಾಗಿವೆ. ಅದರಲ್ಲಿ 196 ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದನ್ನು ಪ್ರಧಾನಿ ಗಮನಕ್ಕೆ ತಂದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಜೊತೆಗಿದ್ದರು.