ಭ್ರೂಣ ಹತ್ಯೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಲು ಮತ್ತು ತಡೆಯಲು ಹಾಗೂ ಪ್ರಕರಣದ ತನಿಖೆಯನ್ನು ಎಸ್.ಐ.ಟಿ ಗೆ ಒಪ್ಪಿಸಲು ತಿರ್ಮಾನಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ಹಾಗೂ ಪತ್ತೆಜಾಲ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಬಳಿ ಚರ್ಚಿಸಲಾಗಿದೆ, ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಈ ಜಾಲವನ್ನು ಪೊಲೀಸರು ಭೇದಿಸಿದ್ದು, ಇದನ್ನು ಸಂಪೂರ್ಣ ತಡೆಗಟ್ಟಲು ಗೃಹ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾನೂನನ್ನು ಜಾರಿಗೆ ತರಲಾಗುವುದು, ಇದು ರಾಜ್ಯದ ಸಮಸ್ಯೆಯಾಗಿದ್ದು, ಈ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.