ಬರುವ ನವೆಂಬರ್ 15-16ರೊಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದು ನಿಶ್ಚಿತವಾಗಿದ್ದು, ನವೆಂಬರ್ ಬಳಿಕ ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸಿಡಿಯಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಖಡಕ್ ಸೂಚನೆ ಹಿನ್ನೆಲೆಯಲ್ಲಿ ಕೆಲ ದಿನ ತಣ್ಣಗಾಗಿದ್ದ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ.
ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ ಅವರು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದಾಗಿ ವದಂತಿ ಹಬ್ಬಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿದೆ.
ಚಿಕ್ಕಬಳ್ಳಾಪುರ ಪ್ರಾಥಮಿಕ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ 10 ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಈ ಮೂಲಕ ಸಂಸದ ಡಾ.ಕೆ.ಸುಧಾಕರ್ ಮತ್ತೊಮ್ಮೆ ಪಿಎಲ್ಡಿ ಬ್ಯಾಂಕ್ ಅಧಿಕಾರವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಹಿಂದ ವರ್ಗಕ್ಕೆ ನೀಡುವ ವಿಷಯವನ್ನು ಎಲ್ಲರೂ ಸೇರಿ ಚರ್ಚಿಸಬೇಕಾಗುತ್ತದೆ, ನಮ್ಮನ್ನು ಕೇಳಿದಾಗ ಆ ಬಗ್ಗೆ ಚರ್ಚಿಸುತ್ತೇವೆ, ಈ ವಿಚಾರ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.
ವಿಧಾನಸಭೆ ಅರ್ಜಿ ಸಮಿತಿ ಹಾಗೂ ವಸತಿ ಸೌಕರ್ಯಗಳ ಸಮಿತಿ ಅಧ್ಯಕ್ಷರೂ ಆಗಿರುವ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ನೇತೃತ್ವದಲ್ಲಿ ಶಾಸಕರು ಉತ್ತರಪ್ರದೇಶದ ಅಧ್ಯಯನ ಪ್ರವಾಸದ ವೇಳೆ ಕುಂಭಮೇಳ ನಡೆಯುವ ಪ್ರಯಾಗ್ರಾಜ್ ಸೇರಿ ಕಾಶಿ ಮತ್ತಿತರ ಕಡೆ ಭೇಟಿ ಮಾಡಲು ಹೊರಟಿರುವುದು ವಿವಾದಕ್ಕೆ ಕಾರಣವಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ನಡುವೆ ಮತ್ತೆ ಶೀತಲ ಸಮರ ಮುಂದುವರೆದಿದೆ. ರಾಜಣ್ಣ ಅವರು ದೊಡ್ಡವರು, ಅವರ ಬಗ್ಗೆ ಮಾತನಾಡುವುದಿಲ್ಲ.