‘ಬಿಜೆಪಿ ವರಿಷ್ಠರು ನನಗೆ ಯಾವುದೇ ನೋಟಿಸ್ ನೀಡಿಲ್ಲ. ಒಂದು ವೇಳೆ ನೋಟಿಸ್ ಬಂದರೂ ನಾನು ಅದಕ್ಕೆ ಉತ್ತರ ನೀಡುವುದಿಲ್ಲ’ ಎಂದು ನಗರ ಬಿಜೆಪಿ ಶಾಸಕ ಹಾಗೂ ರಾಜ್ಯ ಬಿಜೆಪಿ ಭಿನ್ನರ ಪಡೆ ನಾಯಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಜಾರಿಗೊಳಿಸಿದ್ದ ಸಮನ್ಸ್ಗೆ ನೀಡಿರುವ ತಡೆಯಾಜ್ಞೆಯನ್ನು ಫೆ.20ರವರೆಗೆ ಹೈಕೋರ್ಟ್ ವಿಸ್ತರಿಸಿದೆ.
ಕಳೆದ ವರ್ಷ ನಡೆದ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಾರಥ್ಯದಲ್ಲೇ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಸನ್ನದ್ಧವಾಗುತ್ತಿದೆ.
ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ದೆಹಲಿ ನಿವಾಸದಲ್ಲಿ ಸೋಮವಾರ ಗೃಹಪ್ರವೇಶದ ನೆಪದಲ್ಲಿ ಬಿಜೆಪಿಯ ಕೆಲ ನಾಯಕರು, ಅದರಲ್ಲೂ ಲಿಂಗಾಯತ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
‘ಮುಖ್ಯಮಂತ್ರಿ ಸಿದ್ಧರಾಮಯ್ಯ 11 ಕೆವಿ ಕರೆಂಟ್ ಅಲ್ಲ. ಅದು 660 ಕೆವಿ ಕರೆಂಟ್. ಅವರನ್ನು ಮುಟ್ಟೋದು ಅಷ್ಟು ಸುಲಭವಲ್ಲ’ ಎಂದು ಬಿಜೆಪಿ ಶಾಸಕ ಮುನಿರತ್ನ ಹಾಡಿ ಹೊಗಳಿದ್ದಾರೆ.
ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ.ಕೆ.ಸುಧಾಕರ್ ಅವರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಬಿ.ಸಂದೀಪ್ ಆಯ್ಕೆಗೆ ಪಕ್ಷದ ವರಿಷ್ಠರು ತಡೆ ನೀಡಿದ್ದಾರೆ.
ಒಂದು ವೇಳೆ ಬಿಜೆಪಿ ಹೈಕಮಾಂಡ್ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಿಸುವ ನಿರ್ಣಯ ಕೈಗೊಂಡಲ್ಲಿ ಲಿಂಗಾಯತ ಸಮುದಾಯದಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಹೆಸರುಗಳನ್ನು ಪರಿಶೀಲಿಸಬೇಕು ಎಂಬ ಚರ್ಚೆ