ಗೋದ್ರಾ ಹತ್ಯಾಕಾಂಡದ ಮಾದರಿಯಲ್ಲಿ ರಾಜ್ಯದಲ್ಲಿ ಗಲಭೆಗೆ ಸಂಚಿನ ಬಗ್ಗೆ ವಿವಾದಾತ್ಮಕ ಹೇಳಿಕೆ ಸಂಬಂಧ ಪೊಲೀಸರಿಂದ ರಾಜ್ಯಪಾಲರು ವರದಿ ಕೇಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಅಧಿಕಾರಿಗಳು ಶುಕ್ರವಾರ ವಿಚಾರಣೆ ನಡೆಸಲು ಯತ್ನಿಸಿದರು.
ನಾಲ್ಕೂವರೆ ವರ್ಷಗಳ ಕಾಲ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಸಂಸದ ಅನಂತಕುಮಾರ ಹೆಗಡೆ ಈಚೆಗೆ ಹಠಾತ್ತಾಗಿ ಕಾಣಿಸಿಕೊಂಡು ಎಲ್ಲೆಡೆ ಮಿಂಚಿನಂತೆ ಸಂಚರಿಸುತ್ತಿರುವುದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ.
ಕೇಂದ್ರ ಸರ್ಕಾರದಿಂದ ರಾಜ್ಯ ಹಾಗೂ ಕನ್ನಡಿಗರಿಗೆ ಅನ್ಯಾಯವಾಗುತ್ತಿದ್ದು, ಪ್ರಧಾನಿಯವರು ಈ ಬಗ್ಗೆ ಸ್ಥಳ ಹಾಗೂ ಸಮಯ ನಿಗದಿಪಡಿಸಿದರೆ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ಸಿದ್ಧವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋದಿಗೆ ಆಹ್ವಾನ ನೀಡಿದ್ದಾರೆ.
ಅವರು ಮೈಸೂರು ಗರಡಿಯಲ್ಲಿ ಬೆಳೆದಿದ್ದರೆ, ನಾನು ಕೂಡ ಮೈಸೂರು ಗರಡಿಯಲ್ಲಿಯೇ ಪಳಗಿದ್ದೇನೆ. ಅದೇ ಗರಡಿಯಲ್ಲಿಯೇ ನಾನೂ ಕುಸ್ತಿ ಆಡಿದ್ದೇನೆ. ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದರೆ ನಾನೇನು ಮಾಡಲಿ?’ ಎಂದು ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಅವರು ಸಿದ್ದು ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಹೆಚ್ಚು ಎಂಪಿ ಸೀಟು ಗೆದ್ದರೆ ಸಿದ್ದು 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದು ಯತೀಂದ್ರ ಹೇಳಿಕೆ ನೀಡಿರುವುದು ಭಾರಿ ಸಂಚಲನ ಮೂಡಿಸಿದೆ. ಇದರ ತೀರ್ಮಾನ ಮಾಡೋದು ವರಿಷ್ಠರು ಎಂದು ಸಿಎಂ ಸಿದ್ದರಾಮಯ್ಯ ಸಮಜಾಯಿಷಿ ನೀಡಿದ್ದಾರೆ.
ದಾರಿ ತಪ್ಪಿಸುವ ಇಂತಹ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ ಎಂದು ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರೋಕ್ಷ ವಾಗ್ಧಾಳಿ ನಡೆಸಿದರು.