ಸಿದ್ದು, ಡಿಕೆಶಿ, ಸಚಿವರಿಗೆ ಹೈಕಮಾಂಡ್ ಬುಲಾವ್ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ಬುಲಾವ್ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ದೆಹಲಿಗೆ ಬರುವಂತೆ ಕಾಂಗ್ರೆಸ್ನ ಕೇಂದ್ರ ನಾಯಕರು ಸೂಚಿಸಿದ್ದಾರೆ.