ಸರ್ಕಾರಕ್ಕೆ ಎರಡೂವರೆ ವರ್ಷವಾಗುವವರೆಗೂ (ನವೆಂಬರ್ವರೆಗೂ) ಯಾವುದೇ ರೀತಿಯ ಬೇಡಿಕೆಯೊಂದಿಗೆ ನಮ್ಮ ಬಳಿ ಬರಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನವೂ ಸೇರಿದಂತೆ ಪ್ರಮುಖ ಹುದ್ದೆಗಳ ಆಕಾಂಕ್ಷಿಗಳಿಗೆ ಕಟ್ಟಾಜ್ಞೆ
ರಾಜ್ಯದಲ್ಲಿ ಉತ್ತಮ ರಾಜಕಾರಣಿಗಳನ್ನು ತಯಾರು ಮಾಡುವ ದೃಷ್ಟಿಯಿಂದ ರಾಜಕೀಯ ಕಾಲೇಜು ಆರಂಭಿಸುವ ಚಿಂತನೆ ನಡೆಸಿರುವುದಾಗಿ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಸದನದಿಂದ ಆರು ತಿಂಗಳ ಕಾಲ ಅಮಾನತಾಗಿದ್ದ 18 ಮಂದಿ ಬಿಜೆಪಿ ಶಾಸಕರ ಅಮಾನತು ಹಿಂಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.