ಫಲಾನುಭವಿಗಳ ಮನೆಗಳಿಗೇ ಡೀಸಿ ಭೇಟಿಕನಕಪುರ: ನಗರದ ತಾಲೂಕು ಕಚೇರಿಯ ರೆಕಾರ್ಡ್ ರೂಂ ಹಾಗೂ ಫಲಾನುಭವಿಗಳ ಮನೆಗಳಿಗೆ ರಾಮನಗರ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನಲ್ಲಿ ಬರಪರಿಹಾರ ನಿಧಿ ಹಾಗೂ ಕೇಂದ್ರ ಸರ್ಕಾರದ ರೈತರ ಯೋಜನೆಯ ಹಣ ರೈತರ ಖಾತೆಗೆ ನೇರವಾಗಿ ವರ್ಗಾವಣೆಯಾಗುವ ಎಫ್ಐಡಿ ಯೋಜನೆಯ ಕಾರ್ಯಕ್ರಮಗಳ ಪ್ರಗತಿಯನ್ನು ಖುದ್ದು ಪರಿಶೀಲಿಸಲು ತಾಲೂಕಿಗೆ ಆಗಮಿಸಿದ್ದ ಅವರು, ಚಿಕ್ಕಮುದವಾಡಿ ಗ್ರಾಮದಲ್ಲಿ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಪರಿಶೀಲಿಸಿ, ಎಫ್ಐಡಿ ಯೋಜನೆಯಲ್ಲಿ ಪ್ರತಿಯೊಬ್ಬರೂ ತಮ್ಮ ತಮ್ಮ ದಾಖಲೆಗಳನ್ನು ನೋಂದಾಯಿಸಿಕೊಳ್ಳುವಂತೆ ಸೂಚಿಸಿದರು.