ಹತ್ಯೆಗೀಡಾದ ಪಾಂಗಳದ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೋಮವಾರ ಭೇಟಿ ನೀಡಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.
ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಪುನರುಚ್ಚರಿಸಿದ್ದು, ‘ಬಿಜೆಪಿ, ಆರ್ಎಸ್ಎಸ್, ಆಯೋಗ ವೋಟ್ ಚೋರಿ ನಡೆಸಿವೆ. ಜನರ ಮತಹಕ್ಕು ಕಸಿದು ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಬಿಹಾರದಲ್ಲಿ ಆ ರೀತಿ ಮಾಡಲು ಬಿಡಲ್ಲ. ಇಡೀ ದೇಶಕ್ಕೆ ನಮ್ಮ ಆಂದೋಲನ ವ್ಯಾಪಿಸಲಿದೆ
'ಕಾಂಗ್ರೆಸ್ ವಿರುದ್ಧ ಮತಗಳ್ಳತನದ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಅದೇ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಆಗಿದ್ದಾರೆ ಹಾಗೂ ಬಿಹಾರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ನ ವೋಟ್ ಅಧಿಕಾರ್ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ’
ಎರಡನೇ ಬಾರಿಗೆ 1991ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಮೋಸದಿಂದ ನನ್ನನ್ನು ಸೋಲಿಸಲಾಯಿತು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು ನೆರವು ನೀಡಿದ್ದರು