ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದೆ
ರಾಜ್ಯದಲ್ಲಿ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯ (ಜಾತಿಗಣತಿ) ದತ್ತಾಂಶಕ್ಕೆ ಸಂಬಂಧಿಸಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, 11 ಸಚಿವರು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
11 ಪಂದ್ಯದಲ್ಲಿ 8 ಗೆದ್ದು ಸುಭದ್ರ ಸ್ಥಿತಿಯಲ್ಲಿರುವ ಆರ್ಸಿಬಿ । ಮತ್ತೊಂದು ಜಯದ ಮೂಲಕ ಪ್ಲೇ-ಆಫ್ಗೆ ಅಧಿಕೃತ ಪ್ರವೇಶಕ್ಕೆ ಕಾತರ - ತವರಿನಾಚೆ ಸತತ 7ನೇ ಜಯ ಗುರಿ । ಲಖನೌಗೆ ಇದು ಡು ಆರ್ ಡೈ ಪಂದ್ಯ । ಸೋತರೆ ಪ್ಲೇ-ಆಫ್ ಬಾಗಿಲು ಅಧಿಕೃತವಾಗಿ ಬಂದ್
ಪಹಲ್ಗಾಂ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ‘ಆಪರೇಷನ್ ಸಿಂದೂರ’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ರಾಜ್ಯ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬೆಳಗ್ಗೆ 9.30 ಗಂಟೆಗೆ ಬೆಂಗಳೂರಿನಲ್ಲಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ಲಿಖಿತವಾಗಿ ಸಲ್ಲಿಕೆಯಾಗಲಿದ್ದು, ಕೇಂದ್ರ ಸರ್ಕಾರವೂ ಜಾತಿಗಣತಿ ಘೋಷಿಸಿರುವುದರಿಂದ ರಾಜ್ಯದ ಜಾತಿಗಣತಿ ವರದಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆಯಾಗುವ ನಿರೀಕ್ಷೆಯಿದೆ.
ನಮಗೆ ಭಾವನಾತ್ಮಕವಾಗಿ ಸರ್ಕಾರ ಮುನ್ನಡೆಸುವುದಕ್ಕೆ ಬರುವುದಿಲ್ಲ. ಜನರ ಮನಸ್ಸನ್ನು ಕದಡುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ.