ಫೆಬ್ರವರಿ ಅಂತ್ಯಕ್ಕೆ ಬಿಜೆಪಿಗೆ ಹೊಸ ರಾಷ್ಟ್ರಾಧ್ಯಕ್ಷ ನೇಮಕ ಕಸರತ್ತು । ಮೋದಿ ನಂತರ ಯಾರೆಂಬ ಪ್ರಶ್ನೆಗೆ ಆಗಲೇ ಉತ್ತರ?
ಮೋದಿ ಗಾದಿಗೆ ಅಮಿತ್ ಶಾ, ಶಿವರಾಜ ಪೈಪೋಟಿ!
ಈಗಲೂ 60 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಬಿಜೆಪಿ ಬಂಡಾಯ ಗುಂಪಿನ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದ್ದರೂ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧ ಮಾಡಿರುವ ಟೀಕಾಪ್ರಹಾರಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಲಕ್ಷ್ಯ ತೋರಿದ್ದಾರೆ.
ನನ್ನ ಒಂದು ವರ್ಷದ ಪರಿಶ್ರಮದ ಪರಿಣಾಮವಾಗಿ ವರಿಷ್ಠರು ನನ್ನನ್ನೇ ರಾಜ್ಯಾಧ್ಯಕ್ಷನನ್ನಾಗಿ ಮುಂದುವರೆಸುತ್ತಾರೆ ಎನ್ನುವ ದೃಢ ವಿಶ್ವಾಸ ಇದೆ ಎಂದು ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
‘ನಾನೇ ಪಕ್ಷ ಕಟ್ಟುತ್ತೇನೆ. ಪಕ್ಷವನ್ನು ನಾನೇ ಅಧಿಕಾರಕ್ಕೆ ತರುತ್ತೇನೆ’ ಎಂದರೆ, ಇದರರ್ಥ ‘ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಅಂಥ ತಾನೇ?’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ನಡುವಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಅವರು ಬೆಳಗಾವಿಯಲ್ಲಿ ಶುಕ್ರವಾರ ಇಬ್ಬರೂ ಮುಖಂಡರ ಜೊತೆಗೆ ಪ್ರತ್ಯೇಕವಾಗಿ ಗೌಪ್ಯ ಸಭೆ ನಡೆಸಿದ್ದು, ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಶೀಘ್ರವೇ 15 ಜನ ಕಾಂಗ್ರೆಸ್ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.