ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸತೀಶ್ ಜಾರಕಿಹೊಳಿ ನಡುವಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಅವರು ಬೆಳಗಾವಿಯಲ್ಲಿ ಶುಕ್ರವಾರ ಇಬ್ಬರೂ ಮುಖಂಡರ ಜೊತೆಗೆ ಪ್ರತ್ಯೇಕವಾಗಿ ಗೌಪ್ಯ ಸಭೆ ನಡೆಸಿದ್ದು, ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಶೀಘ್ರವೇ 15 ಜನ ಕಾಂಗ್ರೆಸ್ ಸದಸ್ಯರು ದುಬೈ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಆಪ್ತ ಶಾಸಕ ಆಸೀಫ್ ಸೇಠ್ ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ರಾಜ್ಯ ಬಿಜೆಪಿಯ ಬಣ ರಾಜಕೀಯ ಮುಂದುವರೆದಿದ್ದು, ದೆಹಲಿ ವಿಧಾನಸಭಾ ಚುನಾವಣೆ ಭರಾಟೆ ಮುಗಿದ ಬಳಿಕ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ನಾಯಕರು ಅದಕ್ಕೂ ಮುನ್ನ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲು ಚಿಂತನೆ ನಡೆಸಿದ್ದಾರೆ.
ನನ್ನ ವಿರುದ್ಧ ದುರುದ್ದೇಶಪೂರ್ವಕವಾಗಿ ಷಡ್ಯಂತ್ರ ಮಾಡಲಾಗುತ್ತಿದ್ದು, ಕೆಲವರು ತಮ್ಮ ಮಾನ ಉಳಿಸಿಕೊಳ್ಳಲು ವಾಮಮಾರ್ಗ ಹಿಡಿದಿದ್ದಾರೆ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ವಿಧಾನಪರಿಷತ್ ಕಲಾಪ ವೇಳೆ ಶಾಸಕ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದ ಪ್ರಕರಣ ಸಂಬಂಧ ಘಟನಾ ಸ್ಥಳದ ಮಹಜರ್ ಪ್ರಕ್ರಿಯೆಯನ್ನೇ ನಡೆಸದೆ ತನಿಖೆ ಪೂರ್ಣಗೊಳಿಸಲು ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಿರ್ಧರಿಸಿದೆ.
ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಅಭಿಯೋಜನೆ ಸಂಬಂಧ ಮತ್ತೆ ರಾಜ್ಯಪಾಲರ ಅನುಮತಿಗೆ ಸಾವಿರಾರು ಪುಟಗಳ ಭಾಷಾಂತರದ ವರದಿ ಮೂಲಕ ಕೋರಿಕೆ ಸಲ್ಲಿಸಲು ಲೋಕಾಯುಕ್ತ ವಿಭಾಗದ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಕರ್ನಾಟಕದ ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸುತ್ತಿದ್ದ ಸಿಬ್ಬಂದಿ ಹತ್ಯೆಗೈದು ಹಣದ ಸಮೇತ ಹೈದ್ರಾಬಾದ್ಗೆ ಪರಾರಿಯಾಗಿದ್ದ ಇಬ್ಬರು ದರೋಡೆಕೋರರ ಗುಂಪು ಅಲ್ಲೂ ಬೀದರ್ ಮತ್ತು ಹೈದ್ರಾಬಾದ್ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದೆ.
ರಾಜ್ಯ ಕಾಂಗ್ರೆಸ್ನೊಳಗಿನ ಬಣ ರಾಜಕಾರಣದ ತಿಕ್ಕಾಟ ಬಗೆಹರಿಸಲು ಇತ್ತೀಚೆಗಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶುಕ್ರವಾರದಿಂದ ಎರಡು ದಿನಗಳ ಕಾಲ ಬೆಳಗಾವಿಗೆ ಆಗಮಿಸಲಿದ್ದಾರೆ.