ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾಗಿದೆ ಎಂಬ ವರದಿ ಹಾಗೂ ಡಿಕೆಶಿ ಸಿಎಂ ಆಗಬೇಕು ಎಂಬ ಅವರ ಆಪ್ತರ ಹೇಳಿಕೆಗಳ ನಡುವೆಯೇ ಸಿದ್ದು ಪರ ಸಂಪುಟದ ಸಚಿವರು ಬ್ಯಾಟಿಂಗ್ ನಡೆಸಿದ್ದಾರೆ
ನಗರದ ಚಾಮರಾಜಪೇಟೆಯಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಅಮಾನವೀಯ ಕೃತ್ಯದ ವಿರುದ್ಧ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಾಜಸತ್ತೆ ಇರಲಿ ಅಥವಾ ಪ್ರಜಾಪ್ರಭುತ್ವ ಇರಲಿ, ಇತಿಹಾಸದ ಪುಟಗಳನ್ನು ತಿರುವಿ ಹಾಕಿದಾಗ ಕಾಣುವ ಒಂದು ಸತ್ಯ ಎಂದರೆ- ಒಂದು ಒರೆಯಲ್ಲಿ ಎರಡು ಕತ್ತಿಗಳನ್ನು ಇಟ್ಟುಕೊಂಡು ಪ್ರಭುತ್ವವನ್ನು ಸುಸೂತ್ರವಾಗಿ ಬಹಳ ದಿನ ನಡೆಸಲು ಸಾಧ್ಯವಾಗುವುದಿಲ್ಲ.
ನಾಡಿನ ಶಕ್ತಿ ಕೇಂದ್ರಗಳಾದ ವಿಧಾನಸೌಧ, ಸುವರ್ಣ ಸೌಧ, ಮುಖ್ಯಮಂತ್ರಿ ಮನೆ ಹಾಗೂ ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಗೂ ಪ್ರತಿಭಟನೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದರೆ ಇನ್ನು ಮುಂದೆ ಮಹಿಳೆಯರಿಂದಲೇ ‘ಲಾಠಿಯೇಟು’ ಗ್ಯಾರಂಟಿ..!
ಕಾಂಗ್ರೆಸ್ ಪಕ್ಷವು ಪ್ರತಿಪಕ್ಷ ಜೆಡಿಎಸ್ನ ಸದಸ್ಯರನ್ನು ಸೆಳೆಯುವ ಕಾರ್ಯತಂತ್ರಕ್ಕೆ ಪ್ರತಿ ತಂತ್ರಗಾರಿಕೆ ರೂಪಿಸುವುದು ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಸದಸ್ಯತ್ವ ನೋಂದಣಿ ಹೆಚ್ಚಿಸಲು ಜೆಡಿಎಸ್ ಮಹತ್ವದ ಸಭೆ ಕರೆಯಲಾಗಿದೆ.