ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಬಹುಕೋಟಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಐಶ್ವರ್ಯ ಗೌಡ ದಂಪತಿ ತಮಗೆ ಉಡುಗೊರೆಯಾಗಿ ನೀಡಿದ್ದ ಐಷಾರಾಮಿ ಬೆನ್ಜ್ ಕಾರನ್ನು ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಇದೀಗ ಪೊಲೀಸರಿಗೆ ಒಪ್ಪಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಹೇಳಿಕೆಗಳ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ ಸೋಮವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ತಾಕೀತು ಮಾಡುವ ಸಾಧ್ಯತೆಯಿದೆ.
ರಾಜ್ಯದ ಎಲ್ಲೆಡೆಯಿಂದ ಆಗಮಿಸಿ ನಗರದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಮಾಸಿಕ 10,000 ರು. ಗೌರವಧನ ನೀಡುವುದು ಸೇರಿ ಬಹುತೇಕ ಬೇಡಿಕೆ ಈಡೇರಿಸುವ ಭರವಸೆ ನೀಡಿದೆ.
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದ್ದು, ಪ್ರತಿಯೊಂದಕ್ಕೂ ಸರ್ಕಾರ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ತಾರಕಕ್ಕೇರಿದ ಭಿನ್ನಮತ, ಬಣ ರಾಜಕೀಯದ ನಡುವೆ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಅಖಾಡಕ್ಕೆ ಇಳಿದಿದ್ದು, ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
ಪಕ್ಷದ ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳ ಸಭೆ ನಡೆ ಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪರೋಕ್ಷವಾಗಿ ಪಕ್ಷದ ಭಿನ್ನಮತೀಯರಿಗೆ ಮತ್ತು ವರಿಷ್ಠರಿಗೆ ಸಂದೇಶ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿದ ಸಚಿವರು, ಶಾಸಕರ ಸಭೆ ರದ್ದಾಗಿಲ್ಲ. ಪಕ್ಷದ ರಾಷ್ಟ್ರೀಯ ನಾಯಕರೂ ಭಾಗವಹಿಸಬೇಕೆಂಬ ಕಾರಣಕ್ಕಾಗಿ ಆ ಸಭೆಯನ್ನು ಮುಂದೂಡಲಾಗಿದೆಯಷ್ಟೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರ ಸುಭದ್ರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಾವೆಲ್ಲ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರದ ಬಗ್ಗೆ ಯಾರೂ ಭವಿಷ್ಯ ನುಡಿಯುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ. ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ. ಈ ಅವಧಿಯಲ್ಲಿ ಮಾತ್ರವಲ್ಲ, ಮುಂದಿನ ಅವಧಿಗೂ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.