ಗುರುವಾರ ಸಂಜೆ ಸಚಿವ ಸಂಪುಟ ಸಭೆ ಮುಗಿದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಡಿನ್ನರ್ ಪಾರ್ಟಿ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್ನಲ್ಲಿನ ಬಣ ರಾಜಕೀಯ ಜೋರಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದಾರೆ.
ಸದನದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಸತ್ಯ. ಕಾನೂನು ಪ್ರಕಾರ ಅವರ ಮೇಲೆ ತನಿಖೆ ನಡೆದು ಶಿಕ್ಷೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತದ ದುಷ್ಟ ಪ್ರಯತ್ನ ಮಾಡುತ್ತಿದೆ. ಆದರೆ, ಅದು ವರ್ಕ್ ಆಗುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ರಾಜ್ಯ ಬಿಜೆಪಿಯ ಕೆಲ ನಾಯಕರು ಔಪಚಾರಿಕವಾಗಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು.
‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.12ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿದ್ದರು. ಅಲ್ಲದೆ, 2008-2013ರವರೆಗೆ ಅಶೋಕ್ ಸಾರಿಗೆ ಸಚಿವರಾಗಿದ್ದಾಗ ಶೇ.47.8ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು.
ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ‘ಗಾಂಧಿಗಿರಿ’ ನಡೆಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕೋರಿಯರ್ ಮೂಲಕ ಸರ್ಜಿ ಗ್ರೂಪ್ ಆಫ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರೂ ಆದ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ನಗರದ ವೈದ್ಯರೂ ಸೇರಿ ವಿವಿಧ ಗಣ್ಯ ವ್ಯಕ್ತಿಗಳಿಗೆ ‘ಸಂಶಯಾಸ್ಪದ ವಿಷಮಿಶ್ರಿತ ಲಾಡು’ಗಳಿರುವ ಪಾರ್ಸಲ್ ಅನ್ನು ಕೋರಿಯರ್ ಮೂಲಕ ಕಳುಹಿಸಿರುವ ಅಘಾತಕಾರಿ ಘಟನೆ
ಬಿಜೆಪಿಯ ಭಿನ್ನರ ಗುಂಪು ಆರಂಭಿಸಿರುವ ವಕ್ಫ ವಿರೋಧಿ ಹೋರಾಟದ ಎರಡನೇ ಹಂತ ಶನಿವಾರ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಆರಂಭವಾಗಲಿದ್ದು, ‘ವಕ್ಫ್ ಹಠಾವೋ ಜನಜಾಗೃತಿ ಸಮಾವೇಶ’ ನಡೆಸಲು ವೇದಿಕೆ ಸಿದ್ಧಗೊಂಡಿದೆ.
‘ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್ನ ಒಕ್ಕಲಿಗ ಶಾಸಕರು ಸಭೆ ಸೇರಿದ್ದಾರೆ ಎಂಬುದು ಶುದ್ಧ ಸುಳ್ಳು. ಊಟಕ್ಕೆ ಸೇರಿದರೆ ಅದನ್ನೇ ಸಭೆ ಎಂದು ಊಹೆ ಮಾಡಿದರೆ ಹೇಗೆ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ತೀವ್ರ ಸಂಚಲನ ಉಂಟು ಮಾಡಿದ ಧಾರವಾಡ ಜಿಪಂ ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆಗೆ ಶಾಸಕ ವಿನಯ್ ಕುಲಕರ್ಣಿಯೇ ಪ್ರಮುಖ ಕಾರಣ. ಆತನ ಸೂಚನೆ ಮೇರೆಗೆ ಬೆಂಗಳೂರಿನಿಂದ ಕೆಲವರನ್ನು ಕರೆಸಿ ಸಂಚು ರೂಪಿಸಿ ಹತ್ಯೆ ನಡೆಸಲಾಗಿದೆ ಎಂಬ ವಿಚಾರ ಆಪ್ತನಿಂದಲೇ ಬಯಲಾಗಿದೆ.