ಸಿದ್ದರಾಮಯ್ಯಗೆ ಲಜ್ಜೆ, ಅಂಜಿಕೆ ಇಲ್ಲ. ನಾಳೆ ಬೆಳಗ್ಗೆ ಚುನಾವಣೆ ನಡೆದರೂ ನೀವು ನಿರ್ನಾಮ ಆಗುತ್ತೀರ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು.
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವಿಗೆ ನ್ಯಾಯ ಕೊಡಿಸಲು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಹಾಗೂ ಕೇಂದ್ರ ಸರ್ಕಾರದಿಂದ ಸಂಶೋಧನಾ ತಂಡವನ್ನು ಕಳುಹಿಸಿ ಪರಿಶೀಲಿಸಬೇಕೆಂದು ಸಂಸದ ಡಾ.ಕೆ. ಸುಧಾಕರ್ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮೂಡಲಹಿಪ್ಪೆಯಲ್ಲಿ ಬುಧವಾರ ರಾತ್ರಿ ಆಯೋಜಿಸಿದ್ದ ತಮ್ಮ ಹುಟ್ಟುಹಬ್ಬ ಸಮಾರಂಭದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಮತ್ತೆ ನಿಮ್ಮ ಸೂರಜ್ ರೇವಣ್ಣನ ಮೂಲಕ ಸೂರ್ಯ ಹುಟ್ಟೇ ಹುಟ್ಟುತ್ತಾನೆ ಎಂದು ಬೆಂಬಲಿಗರಿಗೆ ಆಶ್ವಾಸನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ರಾಜ್ಯದಲ್ಲಿ ಚುನಾವಣೆ ಮೂಲಕ ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಶಿವರಾಜ್ ಸಿಂಗ್ ಚೌಹಾಣ್ ಮೇಲ್ವಿಚಾರಕರಾಗಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವೇ ಇಲ್ಲ. ಹೀಗಾಗಿ ಪ್ರಿಯಾಂಕ್ ಖರ್ಗೆ ಪರ ಎಲ್ಲಾ ಸಚಿವರು ಗಟ್ಟಿಯಾಗಿ ನಿಲ್ಲಬೇಕು. ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ಮುಂದಿಟ್ಟುಕೊಂಡು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು ಎಂದು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಂಬೇಡ್ಕರ್ರ ಪಿಒಪಿ ಪುತ್ಥಳಿ ಇಟ್ಟು ಅಪಮಾನ ಮಾಡಿ ಅಶಾಂತಿ ವಾತಾವರಣವನ್ನುಂಟು ಮಾಡುತ್ತಿರುವವರನ್ನೂ ಕೂಡಲೇ ಬಂಧಿಸಿ, ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು, ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಸುದರ್ಶನ್ ಯಾದವ್ಗೆ ಮನವಿ ಸಲ್ಲಿಸಿದರು.
ತಳಮಟ್ಟದಿಂದ ಮತ್ತೊಮ್ಮೆ ಪಕ್ಷ ಸಂಘಟಿಸಲು ಸಜ್ಜಾಗಿರುವ ಜೆಡಿಎಸ್ ಇದೇ ತಿಂಗಳಲ್ಲಿ ಸಭೆಯೊಂದನ್ನು ಕರೆದು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ದೂರಮಾಡಿ ಒಗ್ಗಟ್ಟಿನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಸಂಬಂಧ ರಾಜಕೀಯ ತಂತ್ರಗಾರಿಕೆ ರೂಪಿಸುವ ಸಂಬಂಧ ಚರ್ಚೆ ನಡೆಸಲು ಮುಂದಾಗಿದೆ.