ವಕ್ಫ್ ಆಸ್ತಿ ಅಕ್ರಮದ ವರದಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಜಟಾಪಟಿಗೆ ಕಾರಣವಾಯಿತು. ಸದನದ ಹೊರಗೂ ಆರೋಪ- ಪ್ರತ್ಯಾರೋಪ ನಡೆಯಿತು.
ಬೂತ್ ಮಟ್ಟದಿಂದ ಅಧ್ಯಕ್ಷರ ಬದಲಾವಣೆ ಆಗುತ್ತಿದೆ, ರಾಜ್ಯ ಮಟ್ಟದಲ್ಲಿ ಸಹ ಬದಲಾವಣೆ ಆಗುತ್ತೆ. ನಾನು ರಾಜ್ಯಾಧ್ಯಕ್ಷರ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳೋದಿಲ್ಲ. ಅವಕಾಶ ಸಿಕ್ಕಲ್ಲಿ ಅಧ್ಯಕ್ಷ ಸ್ಥಾನವನ್ನು ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
‘ಮಾಣಿಪ್ಪಾಡಿಯವರೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಅವರ ವಿಡಿಯೋ ಹೇಳಿಕೆ ನೋಡಿಯೇ ಪ್ರತಿಕ್ರಿಯೆ ನೀಡಿದ್ದೇನೆ. ಈಗ ಯಾಕೆ ಉಲ್ಟಾ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜೊತೆಯಲ್ಲಿ ಇದ್ದು ಬೀಳಿಸಿದವರು, ದೇವರಿಗೆ ನಮಸ್ಕಾರ ಮಾಡಕ್ಕೆ ಮಲಗಿದ್ದಾಗ ಕತ್ತಿ ಇಟ್ಟರು, ಇವರಿಗೆ ಎಲ್ಲರಿಗಿಂತಲೂ ಕೃತಜ್ಞತೆ ಅರ್ಪಿಸಿ ಭಗವಂತ ಕಾಪಾಡಪ್ಪ, ನಮ್ಮಂತ ದುಷ್ಟರನ್ನು ಅವರು ಮಂಥನ ಮಾಡ್ತಾ ಇರಲಿ ದೇಶ ಚೆನ್ನಾಗಿರಲಿ ಎಂದು ಯಾರೋಬ್ಬರ ಹೆಸರು ಹೇಳದೆ ಸೋಲಿಗೆ ಕಾರಣರಾದವರನ್ನು ಟೀಕಿಸಿದ್ದಾರೆ.
ಮೀಸಲಿಗಾಗಿ ಪಂಚಮಸಾಲಿಗಳು ಸಿಡಿದೆದ್ದಿರುವುದೇಕೆ? -ಪಂಚಮಸಾಲಿಗಳನ್ನು 2ಎಗೆ ತಂದರೆ ಕುರುಬರು ಒಪ್ತಾರಾ? ಸಮುದಾಯವರು ಅಧ್ಯಯನ ನಡೆಸಿದರೆ ತಲೆ ಬಿಸಿ ಏರುತ್ತಾ?
ವಕ್ಫ್ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 150 ಕೋಟಿ ರುಪಾಯಿ ಆಮಿಷವೊಡ್ಡಿದ್ದಾರೆಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಮಾಣಿಪ್ಪಾಡಿ ಮಾಡಿರುವ ಆರೋಪ ಸಂಬಂಧ ಪ್ರಧಾನಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.