ಹನಿಟ್ರ್ಯಾಪ್ ಪ್ರಕರಣದ ತನಿಖೆ ನಡೆಯುತ್ತಿದೆ. ನಾನು ಸಹ ಏ.14ರ ಬಳಿಕ ಸಿಐಡಿ ವಿಚಾರಣೆಗೆ ಹೋಗುತ್ತೇನೆ. ಪ್ರಕರಣದಿಂದ ಯಾರಿಗೆ ಬೇಸರ, ಯಾರಿಗೆ ಖುಷಿ ಆಗಿದೆಯೋ ಗೊತ್ತಿಲ್ಲ. ಆದರೆ ನಾನಂತು ನನ್ನ ಗೌರವ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
‘ತಮ್ಮಲ್ಲಿರುವ ದಾಖಲೆ ಕೊಟ್ಟರೆ ನಾವೇ ಅದನ್ನು ರಾಜ್ಯಪಾಲರಿಗೆ ತಲುಪಿಸುತ್ತೇವೆ’ ಎಂದು ಕ್ಯಾಂಟರ್ ಟ್ರಕ್ನಲ್ಲಿ ಜೆಡಿಎಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
‘ಬಾಬಾಸಾಹೇಬರ ನಿಪ್ಪಾಣಿ ಭೇಟಿಗೆ 100 ಸಂಭ್ರಮ’
- ಬಿಜೆಪಿಯಿಂದ ‘ಭೀಮ ಹೆಜ್ಜೆ-100ರ ಸಂಭ್ರಮ’ ರಥಯಾತ್ರೆ । 15ಕ್ಕೆ ನಿಪ್ಪಾಣಿಯಲ್ಲಿ ಬೃಹತ್ ಸಮಾವೇಶ
ಗುತ್ತಿಗೆದಾರರ ಸಂಘ, ಪೂರಕ ದಾಖಲೆ ನೀಡಲು ವಿಫಲವಾಗಿದೆ. ಹೀಗಾಗಿ ಶೇ.40ರಷ್ಟು ಕಮಿಷನ್ ಆರೋಪ ಖಚಿತ ಎಂಬ ಅಭಿಪ್ರಾಯ ತಳೆಯುವುದು ಆಯೋಗಕ್ಕೆ ಕಷ್ಟವಾಗಿದೆ ಎಂದು ನ್ಯಾ. ಎಚ್.ಎನ್.ನಾಗಮೋಹನ್ದಾಸ್ ಆಯೋಗ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿದೆ.
ನಮ್ಮ ಸರ್ಕಾರ ನ್ಯಾಯಬದ್ಧವಾಗಿ ಆಡಳಿತ ನೀಡುತ್ತಿದೆ. ನಾವು ಯಾವುದೇ ಲಂಚಕ್ಕೆ ಪ್ರೋತ್ಸಾಹ ನೀಡುವವರಲ್ಲ. ಗುತ್ತಿಗೆದಾರರಿಗೆ ಹಣ ಬಿಡುಗಡೆಗೆ ಯಾರಾದರೂ ಲಂಚ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರ ಈಗ 80 ಪರ್ಸೆಂಟ್ ಭ್ರಷ್ಟಾಚಾರ ನಡೆಸಿ ದೇಶದಲ್ಲೇ ನಂ.1 ಭ್ರಷ್ಟಾಚಾರದ ಸರ್ಕಾರವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಮಾಡಿದ್ದಾರೆ.