ಮರಾಠಿಗರ ಕನ್ನಡ ವಿರೋಧಿ ನೀತಿ, ಎಂಇಎಸ್ ನಿಷೇಧ, ಮಹದಾಯಿ, ಮೇಕೆದಾಟು ಜಲಯೋಜನೆ ಜಾರಿಗೆ ಆಗ್ರಹಿಸಿ ಹಾಗೂ ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ರಾಜಧಾನಿ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಡಾ। ಬಿ.ಆರ್.ಅಂಬೇಡ್ಕರ್ ಅವರು 1952ರ ಸಂಸತ್ ಚುನಾವಣೆಯಲ್ಲಿ ಸೋಲನುಭವಿಸಲು ಯಾರು ಕಾರಣ ಎನ್ನುವ ಬಗ್ಗೆ ಶುಕ್ರವಾರ ವಿಧಾನ ಪರಿಷತ್ನಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ, ಘೋಷಣೆ, ಪತ್ರ ಪ್ರದರ್ಶನ, ಗದ್ದಲ ಕೋಲಾಹಲದ ಜೊತೆಗೆ ರಾಜೀನಾಮೆ ಸವಾಲಿಗೂ ಕಾರಣವಾಯಿತು.
ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಬಜೆಟ್ ಅಧಿವೇಶನವು ಒಟ್ಟು 15 ದಿನಗಳ ಕಾಲ ನಡೆದಿದ್ದು, 99.34 ಗಂಟೆಗಳ ಕಾರ್ಯಕಲಾಪ ನಡೆದಿದೆ. ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕ, ವಿವಾದಿತ ಕೆಟಿಪಿಪಿ (ತಿದ್ದುಪಡಿ) ವಿಧೇಯಕ ಸೇರಿ ಒಟ್ಟಾರೆ 27 ವಿಧೇಯಕಗಳನ್ನು ಮಂಡಿಸಿ, ಅಂಗೀಕರಿಸಲಾಗಿದೆ
ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹೆಚ್ಚಳದ ಎರಡು ತಿದ್ದುಪಡಿ ವಿಧೇಯಕಗಳಿಗೆ ಉಭಯ ಸದನಗಳಲ್ಲಿ ಶುಕ್ರವಾರ ಅನುಮೋದನೆ ನೀಡಲಾಯಿತು.
ಬಿಜೆಪಿ ಶಾಸಕರ ವಿರೋಧದ ನಡುವೆಯೇ ಅಲ್ಪಸಂಖ್ಯಾತ (ಮುಸ್ಲಿಂ)ರಿಗೆ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಮಂಡಲದಲ್ಲಿ ಅನುಮೋದನೆ ನೀಡಲಾಯಿತು.
‘ತಮ್ಮ ವಿರುದ್ಧ ಹನಿಟ್ರ್ಯಾಪ್ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ಯಾವ ಪಕ್ಷದವರೇ ಆದರೂ ಅವರನ್ನು ಸುಮ್ಮನೇ ಬಿಡಲ್ಲ’ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪಾದಿಸಿದ್ದಾರೆ.