ಮುಂದಿನ 6 ತಿಂಗಳೊಳಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಿ.ಟಿ. ರವಿ ಅವರು ಅವಾಚ್ಯ ಬಳಸಿ ನಿಂದಿಸಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಗೆ ಅಧಿಕಾರಿಗಳಿಗೆ ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೊಡುವುದಿಲ್ಲ’ ಎಂದು ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಇದೇ ಮೊದಲ ಬಾರಿ ಸ್ಪಷ್ಟವಾಗಿ ಹೇಳಿದ್ದಾರೆ.
ನಗರದ ಹೊರವಲಯದಲ್ಲಿರುವ ಅಲಕಾಪುರಗೇಟ್ ಸಮೀಪದ ಸ್ಥಳೀಯ ಶಾಸಕರ ಕಚೇರಿಯ ಅವರಣದಲ್ಲಿ ಶನಿವಾರ ನಗರಸಭೆಯ ಐವರು ಕಾಂಗ್ರೆಸ್ ಸದಸ್ಯರು ಮತ್ತು ಬೆಂಬಲಿಗರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಸಮ್ಮುಖದಲ್ಲಿ ಕೆಎಚ್ಪಿ ಬಣಕ್ಕೆ ಸೇರ್ಪಡೆಯಾದರು.
ಗುರುವಾರ ಸಂಜೆ ಸಚಿವ ಸಂಪುಟ ಸಭೆ ಮುಗಿದ ಬಳಿಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಏರ್ಪಡಿಸಲಾಗಿದ್ದ ಡಿನ್ನರ್ ಪಾರ್ಟಿ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾಂಗ್ರೆಸ್ನಲ್ಲಿನ ಬಣ ರಾಜಕೀಯ ಜೋರಾಗಿದೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದಾರೆ.
ಸದನದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಸತ್ಯ. ಕಾನೂನು ಪ್ರಕಾರ ಅವರ ಮೇಲೆ ತನಿಖೆ ನಡೆದು ಶಿಕ್ಷೆಯಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತದ ದುಷ್ಟ ಪ್ರಯತ್ನ ಮಾಡುತ್ತಿದೆ. ಆದರೆ, ಅದು ವರ್ಕ್ ಆಗುವುದಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ರಾಜ್ಯ ಬಿಜೆಪಿಯ ಕೆಲ ನಾಯಕರು ಔಪಚಾರಿಕವಾಗಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು.
‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.12ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿದ್ದರು. ಅಲ್ಲದೆ, 2008-2013ರವರೆಗೆ ಅಶೋಕ್ ಸಾರಿಗೆ ಸಚಿವರಾಗಿದ್ದಾಗ ಶೇ.47.8ರಷ್ಟು ಪ್ರಯಾಣ ದರ ಹೆಚ್ಚಳ ಮಾಡಲಾಗಿತ್ತು.
ಹೊಸ ವರ್ಷದ ಆರಂಭದಲ್ಲೇ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ‘ಗಾಂಧಿಗಿರಿ’ ನಡೆಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕೋರಿಯರ್ ಮೂಲಕ ಸರ್ಜಿ ಗ್ರೂಪ್ ಆಫ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರೂ ಆದ ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ನಗರದ ವೈದ್ಯರೂ ಸೇರಿ ವಿವಿಧ ಗಣ್ಯ ವ್ಯಕ್ತಿಗಳಿಗೆ ‘ಸಂಶಯಾಸ್ಪದ ವಿಷಮಿಶ್ರಿತ ಲಾಡು’ಗಳಿರುವ ಪಾರ್ಸಲ್ ಅನ್ನು ಕೋರಿಯರ್ ಮೂಲಕ ಕಳುಹಿಸಿರುವ ಅಘಾತಕಾರಿ ಘಟನೆ