ಡಿ.ಕೆ.ಶಿವಕುಮಾರ್ ಅವರೇ ಏನಿವತ್ತು ಬಹಳ ಪ್ರಸನ್ನವದನರಾಗಿದ್ದೀರಿ, ನಿನ್ನೆ ತಾನೆ ಶಾಸಕರಿಗೆ ಔತಣಕೂಟ ನೀಡಿದ್ದೀರಿ. ಏನಾದ್ರೂ ಶುಭ ಶಕುನ ಸಿಕ್ಕಿದೆಯಾ? ನಮ್ಮ ಬಳಿಯೂ ಸ್ವಲ್ಪ ಆ ಆನಂದ ಹಂಚಿಕೊಳ್ಳಿ ಎಂದು ಕೆಲ ಬಿಜೆಪಿ ಸದಸ್ಯರು ಕಿಚಾಯಿಸಿದ ಘಟನೆ ವಿಧಾನ ಪರಿಷತ್ನಲ್ಲಿ ನಡೆಯಿತು.
ಯಾರೇ ಪ್ರಾದೇಶಿಕ ಪಕ್ಷ ಕಟ್ಟಿದರೂ ಸುದೀರ್ಘ ಕಾಲ ಉಳಿಯುವುದು ಕಷ್ಟ ಎಂದು ಮಾಜಿ ಸಚಿವ ಬಿಜೆಪಿಯ ಹಿರಿಯ ನಾಯಕ ಬಿ. ಶ್ರೀರಾಮುಲು ಹೇಳಿದ್ದಾರೆ.
ಆರ್ಥಿಕ ಹೊಣೆಗಾರಿಕೆ ಕಾಯ್ದೆ ಅಡಿಯಲ್ಲೇ ರಾಜ್ಯ ಸರ್ಕಾರ ಸಾಲ ಪಡೆಯುತ್ತಿದ್ದು, ಕೇಂದ್ರ ಸರ್ಕಾರದಂತೆ ನಾವು ಬೇಕಾಬಿಟ್ಟಿಯಾಗಿ ಸಾಲ ಪಡೆದು ಆಡಳಿತ ನಡೆಸುತ್ತಿಲ್ಲ.
ರಾಜ್ಯದಲ್ಲಿ ಪ್ರವರ್ಗ 2-ಬಿ ಅಡಿ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯೊಂದಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟಿಪ್ಪಣಿ ಬರೆದಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಏರ್ಪಡಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಬಹುತೇಕ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಭಾಗವಹಿಸಿದ್ದರು.
ರಾಜ್ಯದಲ್ಲಿ ಮಾರ್ಚ್ ಅಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂಬ ವದಂತಿ ಹಬ್ಬಿದೆ. ಆದರೆ, ಕಾಂಗ್ರೆಸ್ನ ಉನ್ನತ ಮೂಲಗಳ ಪ್ರಕಾರ ಸಂಪುಟ ವಿಸ್ತರಣೆ ಪ್ರಕ್ರಿಯೆ ಏಪ್ರಿಲ್ ನಂತರವೇ ನಡೆಯಲಿದೆ.
ಕೆ.ಎಚ್. ಪಾಟೀಲರು ಅಗಲಿ 33 ವರ್ಷಗಳು ಸಂದಿವೆ. ಆದರೆ ಇಂದಿಗೂ ಕೂಡ ಜನರ ಮನಸ್ಸಿನಲ್ಲಿ ಹಾಗೆಯೇ ಉಳಿದಿದ್ದಾರೆ. ಪಾಟೀಲ ಸರಳ ಸಜ್ಜನಿಜೆ ವ್ಯಕ್ತಿತ್ವ, ಉತ್ತಮ ಆಡಳಿತವೇ ಇದಕ್ಕೆಲ್ಲ ಮೂಲ ಕಾರಣ
ಸ್ಮಗ್ಲಿಂಗ್ಗಲ್ಲಿ ಪ್ರಮುಖ ರಾಜಕಾರಣಿ ಪಾತ್ರವಹಿಸಲ್ಲ
-ಹಾಗೊಂದು ವೇಳೆ ಇದ್ರೂ ಅದು ಪುಡಾರಿಗಳಷ್ಟೆ, ಪ್ರಮುಖರು ಇರಲ್ಲ । ರಾಜಕೀಯ ಭವಿಷ್ಯ ಹಾಳು ಮಾಡಿಕೊಳ್ಳಲು ಯಾರು ಹೋಗ್ತಾರೆ
-ಪ್ರೊಟೊಕಾಲಲ್ಲಿ ರಾಜಕಾರಣಿ ಹೆಸರು ಹೇಳಿರಬಹುದಷ್ಟೆ । ಏರ್ಪೋರ್ಟ್ ಭದ್ರತೆ ಬಗ್ಗೆ ವಿವರಿಸಿದ ನಿವೃತ್ತ ಕಸ್ಟಮ್ಸ್ ಅಧಿಕಾರಿ
ಕೆಪಿಸಿಸಿ ಅಧ್ಯಕ್ಷರಾಗಿ ಜು.2ಕ್ಕೆ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಮಾ.13 ರಂದು ಕಾಂಗ್ರೆಸ್ನ ಎಲ್ಲಾ ಶಾಸಕರಿಗೂ ಮೂರೂವರೆ ತಿಂಗಳು ಮೊದಲೇ ಔತಣಕೂಟ ಏರ್ಪಡಿಸಿದ್ದಾರೆ.