ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ನೇಮಕ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕರ ಕಚೇರಿಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರನ್ನು ನೇಮಿಸಿಕೊಂಡಿಲ್ಲವಾ ಎಂದು ನೇಮಕ ಪ್ರಶ್ನಿಸಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ತಂದೆ, ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ತಮ್ಮ ಆಸ್ತಿಯನ್ನು ವಿಲ್ ಅಥವಾ ದಾನಪತ್ರದ ಮೂಲಕ ನೀಡಿರುವುದನ್ನು ರದ್ದು ಮಾಡಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿರುವುದು ಮತ್ತು ಅವರಿಗೆ ಜನರ ತೆರಿಗೆ ಹಣ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷ ರಾಜ್ಯಪಾಲರಿಗೆ ದೂರು ನೀಡಿದೆ.
‘ಪ್ರಸಕ್ತ ಅವಧಿಯ ಐದು ವರ್ಷವೂ ನಾನೇ ಮುಖ್ಯಮಂತ್ರಿ. ಮುಂದಿನ ಅವಧಿಯ ಐದು ವರ್ಷವೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ನಾನೇ ಮುಖ್ಯಮಂತ್ರಿ ಆಗಿ ಇರುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಲು ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ..
ಶಾಸಕರ ಬಗ್ಗೆ ಸಚಿವರು ತೋರುತ್ತಿರುವ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ನಮ್ಮ ಮನವಿ, ಅಹವಾಲುಗಳನ್ನು ಸಚಿವರು ಪರಿಗಣಿಸುತ್ತಿಲ್ಲ ಎಂದು ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ವಿವಿಧ ಶಾಸಕರು ಮುಖ್ಯಮಂತ್ರಿಯವರ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.
ದೇವರ ತಪ್ಪು ಅಧಿವೇಶನದಲ್ಲಿ ಮಂಡನೆ!
-ದೇವಾನುದೇವತೆಗಳ ತಪ್ಪು ಕಂಡುಹಿಡಿದ ಸಾಮ್ರಾಟ್ । ಟ್ರೋಲ್ ಜೋಡಿ ಅಧಿವೇಶನದಲ್ಲಿ ದೂರ ದೂರವಾದ ಕತೆ