ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಳ್ಳುತ್ತಿದೆ. ವಕ್ಫ್ ನೋಟಿಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆಯುತ್ತಿರುವ ಜನಜಾಗೃತಿ ಅಭಿಯಾನಕ್ಕೆ ತಿರುಗೇಟು ನೀಡುವ ಸಂಬಂಧ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ವಿಜಯೇಂದ್ರ ಪರ ಮಾಜಿ ಸಚಿವರು ಮತ್ತು ಶಾಸಕರ ಬಣ ಮುಂದಾಗಿದೆ.
ಅಧಿಕಾರದಲ್ಲಿ ಇಲ್ಲದಿದ್ದರೂ ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯ ಮಾತ್ರ ನಿಲ್ಲುತ್ತಿಲ್ಲ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲೂ ಬಣ ರಾಜಕೀಯ ಕಡಮೆ ಏನಿರಲಿಲ್ಲ. ಈಗ ಅವರ ಪುತ್ರ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದಾಗಲೂ ಬಣ ರಾಜಕೀಯದ ಕಾವು ದಿನೇ ದಿನೇ ಏರತೊಡಗಿದೆ.
ದೇವೇಗೌಡರ ಕುಟುಂಬದಿಂದ ಆಚೆ ಬರಬೇಕು ಎಂದು ಒಕ್ಕಲಿಗ ಸಮುದಾಯ ತೀರ್ಮಾನ ಮಾಡಿದೆ. ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದಿಂದಲೇ ಇದು ಗೊತ್ತಾಗುತ್ತಿದೆ-ಸಿ.ಪಿ.ಯೋಗೇಶ್ವರ್
ನೂತನ ಶಾಸಕ ಸಿ.ಪಿ.ಯೋಗೇಶ್ವರ್ ಮೊದಲು ಕಾಂಗ್ರೆಸ್ ಪಕ್ಷದ ಶಾಸಕರ ಬಗ್ಗೆ ಗಮನಹರಿಸಲಿ. ಆಮೇಲೆ ಬೇಕಿದ್ದರೆ ಜೆಡಿಎಸ್ ಶಾಸಕರ ಖರೀದಿ ಬಗ್ಗೆ ಮಾತನಾಡಲಿ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕುಟುಕಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದರೂ ಕುಮಾರಸ್ವಾಮಿ ಅಭಿವೃದ್ಧಿ ಕಾರ್ಯವನ್ನೇ ಮಾಡದಿದ್ದರೆ ಜನರು ತಿರಸ್ಕರಿಸದೆ ಇನ್ನೇನು ಮಾಡುತ್ತಾರೆ. ಸಿ.ಪಿ.ಯೋಗೇಶ್ವರ್ಸಾ 25 ವಿರ ಮತಗಳ ಅಂತರದಲ್ಲಿ ಗೆದ್ದಿದ್ದಾರೆ.
‘ನಾನು ಕುಟ್ತಾಲೇ ಇರ್ತೀನಿ. ಈಗಲೂ ಕುಟ್ತೀನಿ ನೋಡಿ, ಕುಟ್ತಾಲೇ ಇರೋದು ಅಭ್ಯಾಸ ಅಷ್ಟೇ....’
ಹೀಗೆಂದು ತಮ್ಮ ಮುಂದಿದ್ದ ಮೇಜನ್ನು ಮೂರು ಬಾರಿ ಜೋರಾಗಿ ಕುಟ್ಟಿದವರು ನಮ್ಮ ಖಡಕ್ ಮುಖ್ಯಮಂತ್ರಿ ಸಿದ್ದರಾಮಯ್ಯ.
ಉಪ ಚುನಾವಣೆಯಲ್ಲಿ ನಿಖಿಲ್ ಪರ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಸಾ.ರಾ.ಮಹೇಶ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಜಿಟಿಡಿ ಅವರಿಗೆ ಖುದ್ದಾಗಿ ಫೋನ್ ಮಾಡಿ ಆಹ್ವಾನಿಸಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಹೋಗುವ ಕುರಿತು ಚಾಮುಂಡೇಶ್ವರಿ ಕ್ಷೇತ್ರದ ಜನ ನಿರ್ಧಾರ ಮಾಡ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.