ರಿಂಗ್ ರೋಡ್ ನಿರ್ಮಾಣದ ಭೂಸ್ವಾಧೀನಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕಾನೂನು ಉಲ್ಲಂಘಿಸಿ, ಬೆದರಿಸಿ ರೈತರಿಂದ ಸಂದಾನಿತ ದರ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುತ್ತಿದ್ದು, ನಿಲ್ಲಿಸದಿದ್ದರೆ ಜೈಲ್ ಭರೋ ಚಳವಳಿ ನಡೆಸುವುದಾಗಿ ಪಿಆರ್ಆರ್ ರೈತ ಹಾಗೂ ನಿವೇಶನದಾರರ ಸಂಘ ಎಚ್ಚರಿಸಿದೆ.
ಇದೇ ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಕುರ್ಚಿ ಖಾಲಿಯಾಗದಿದ್ದರೆ ನನ್ನ ಬಂದು ಕೇಳಿ ಎಂದು ಚನ್ನಗಿರಿ ಶಾಸಕ ಬಸವರಾಜ ವಿ.ಶಿವಗಂಗಾ ಮುಖ್ಯಮಂತ್ರಿ ಬದಲಾವಣೆಯ ತಮ್ಮ ಹೇಳಿಕೆ ಪುನಾ ಸಮರ್ಥಿಸಿಕೊಂಡಿದ್ದಾರೆ.
ರಾಜ್ಯ ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ವಿಧೇಯಕ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷದ್, ಈ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
‘ಸಂವಿಧಾನವನ್ನು 1947ರಲ್ಲಿ ರಚಿಸಲಾಗಿದೆ ಎಂದು ಜನ ನನ್ನ ಬಳಿ ಹೇಳುತ್ತಾರೆ. ಆದರೆ, ಸಂವಿಧಾನ ಸಾವಿರಾರು ವರ್ಷಗಳಷ್ಟು ಹಳೆಯದು ಎಂದು ನಾನು ಅವರಿಗೆ ಹೇಳುತ್ತೇನೆ’ ಎಂಬ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.