ಬಿಜೆಪಿಯಲ್ಲಿನ ಗುಂಪುಗಾರಿಕೆಯ ಲಾಭಪಡೆದು ವಿಪಕ್ಷ ನಾಯಕರಾಗಿರುವ ಆರ್.ಅಶೋಕ್ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪದೇ ಪದೇ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಅನಾವಶ್ಯಕ ಆರೋಪ, ಪ್ರತಿಭಟನೆಯ ದಾರಿ ಅನುಸರಿಸುತ್ತಿದ್ದಾರೆ
ತಾಲೂಕಿನ ಕಂದವಾರ ಗ್ರಾಮದ ಸರ್ವೇ ನಂಬರ್ ಒಂದರಲ್ಲಿನ 17.12 ಗುಂಟೆ ಜಮೀನು ಸರ್ಕಾರಿ ಶಾಲೆಗೆ ಸೇರಿದ್ದಾಗಿದ್ದು ವಕ್ಫ್ ಮಂಡಳಿಗೆ ಸೇರಿಲ್ಲ, ಪಹಣಿಯಲ್ಲಿದ್ದ ತಾಂತ್ರಿಕ ದೋಷವನ್ನು ತ್ವರಿತವಾಗಿ ಸರಿಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ಸ್ಪಷ್ಟನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ವಕ್ಫ್ ಲ್ಯಾಂಡ್ ಜಿಹಾದ್ ವಿರುದ್ಧ ನಡೆಯುತ್ತಿರುವ ಹೋರಾಟದ ಭಾಗವಾಗಿ ನ. 19 ರ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ
ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಸಂಬಂಧಿಸಿ ಮಂಡ್ಯ ಶಾಸಕ ಪಿ.ರವಿಕುಮಾರ್(ಗಣಿಗ ರವಿ) ಮತ್ತೆ ‘ಬಾಂಬ್’ ಸಿಡಿಸಿದ್ದಾರೆ. ಯಾವ್ಯಾವ ಹೋಟೆಲ್, ಏರ್ಪೋರ್ಟ್, ಗೆಸ್ಟ್ ಹೌಸ್ನಲ್ಲಿ ಸಂಪರ್ಕಿಸಿದ್ದಾರೆ ಎಂಬೆಲ್ಲ ಮಾಹಿತಿ ಇದೆ ಎಂದು ಹೇಳಿದ್ದಾರೆ.
ಮುಡಾ, ವಕ್ಫ್ ಆಸ್ತಿ ವಿವಾದ, ಬಿಪಿಎಲ್ ಕಾರ್ಡ್ ರದ್ದು, ವಾಲ್ಮೀಕಿ ಹಗರಣದಂತಹ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡುವುದರ ಜತೆ ಪ್ರತ್ಯಸ್ತ್ರ ಪ್ರಯೋಗಿಸಿ ಬಿಜೆಪಿ-ಜೆಡಿಎಸ್ ಇಕ್ಕಟ್ಟಿಗೆ ಸಿಲುಕಿಸಲು ಸರ್ಕಾರವೂ ಸಿದ್ಧತೆ
ಸಿರಿವಂತರಿಗೆ ಬಿಪಿಎಲ್ ಕಾರ್ಡ್ ಬೇಕಿಲ್ಲ. ಕಾರು ಹೊಂದಿದ್ದವರು, ಐಟಿ ಟ್ಯಾಕ್ಸ್ ಕಟ್ಟುವವರಿಗೆ ಕಾರ್ಡ್ ಬೇಕಿಲ್ಲ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ನನ್ನ ಸಹಮತ ಇದೆ ಇದು ಒಳ್ಳೆಯ ನಿರ್ಧಾರ ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.
ರಾಜ್ಯದ ಜನರಿಗೆ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು, ಕಮಿಷನ್ ಆರೋಪ ಕಾಂಗ್ರೆಸ್ಸಿನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ರುಜುವಾತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ.
ಹಗರಣಗಳನ್ನು ಖಂಡಿಸಿ ರಾಜ್ಯ ಬಿಜೆಪಿ ಪಕ್ಷದಿಂದ ರಾಜ್ಯದ್ಯಂತ ಹೋರಾಟ ನಡೆಸಲು ಮೂರು ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.